ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಸೇರಿದಂತೆ ಐವರ ಸಾವು!

including

ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಕೂಡ ನಿನ್ನೆ ಚತ್ರದುರ್ಗ ವಾಹನ ಅಪಘಾತದಲ್ಲಿ ಮೃತರಾದವರಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಗಳು ಜಾನಕಿ ಧಾರಾವಾಹಿಯ ನಿರ್ದೇಶಕ ಟಿಎನ್ ಸೀತಾರಾಮ್ ಅವರು ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದ್ದು, ‘ಮಗಳು ಜಾನಕಿ ಯಲ್ಲಿ ಮಂಗಳಕ್ಕನ ಪಾತ್ರ ಮಾಡುತ್ತಿದ್ದ ಶೋಭಾ, ರಸ್ತೆ ಅಪಘಾತ ದಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ಬಂದಿದೆ.

ಸದಾ ನಗುಮುಖದ, ಅಪಾರ ಪ್ರತಿಭೆಯ,ಸೌಜನ್ಯ ತುಂಬಿದ ಮಂಗಳಕ್ಕನ ಅನಿರೀಕ್ಷಿತ ಸಾವು ನನ್ನನ್ನು ದಿಗ್ಭ್ರಮೆ ಗೊಳಿಸಿದೆ.  ತಂಡದ ಪರವಾಗಿ ತೀವ್ರ ಸಂತಾಪಗಳು ಎಂದು ಕಂಬನಿ ಮಿಡಿದ್ದಾರೆ.

ಇನ್ನು ನಿನ್ನೆ, ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಐವರು ಮೃತಪಟ್ಟು ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದರು. ಪೊಲೀಸ್ ಮೂಲಗಳ ಪ್ರಕಾರ ಕಾರಿನಲ್ಲಿ  ಅಶೋಕ್, ಪ್ರವಿತಾ, ಮಂಜುಳಾ, ಕಿರುತೆರೆ ನಟಿ ಶೋಭಾ, ಸುಕನ್ಯಾ, ಶ್ರೇಷ್ಠ  ಸೇರಿ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು.

ಇವರೆಲ್ಲಾ ಬೆಂಗಳೂರಿನ ರಾಜರಾಜೇಶ್ವರಿ ನಗರ ನಿವಾಸಿಗಳಾಗಿದ್ದು ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯಕ್ಕಾಗಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಸೇರಿದ್ದು ಎಲ್ಲಾ ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳಕ್ಕೆ ಚಿತ್ರದುರ್ಗ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *