ಬಿ.ನಾ.ರಾ. ಬಗ್ಗೆ ಅಮೀನ್ ಮಟ್ಟು ಬರೆದದ್ದು-

ಶಾಸಕ ಬಿ.ನಾರಾಯಣ ರಾವ್ ಶನಿವಾರ ವಿಶ್ವಾಸ ಮತ ಯಾಚನೆಯ ಮೇಲೆ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಈ ಮನುಷ್ಯನನ್ನು ನಾನು ಮೊದಲು ನೋಡಿದ್ದು 2003ರಲ್ಲಿ.
ಲೋಕಸಭಾ ಚುನಾವಣೆಗೆ ತಾಲೀಮು ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಯಲ್ಲಿ ಇಡೀ ದೇಶದ ಕಾಂಗ್ರೆಸ್ ಬ್ಲಾಕ್ ಮತ್ತು ಜಿಲ್ಲಾಧ್ಯಕ್ಷರ ಸಭೆ ಕರೆದಿದ್ದರು.( ಸಾಮಾನ್ಯವಾಗಿ ಪಕ್ಷದಲ್ಲಿ ಈ ಮಟ್ಟದ ಪದಾಧಿಕಾರಿಗಳ ಸಭೆ ಕರೆಯುವುದೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೂ ಅದೇ ಕೊನೆಯ ಸಭೆ).
ಆ ಸಭೆಯಲ್ಲಿ ಭಾಗವಹಿಸಿದ್ದ ದಕ್ಷಿಣದ ರಾಜ್ಯಗಳ ಪದಾಧಿಕಾರಿಗಳಿಗೆ ದೊಡ್ಡ ತೊಡಕಾಗಿದ್ದು ಭಾಷೆ. 
ಹಿಂದಿಯಲ್ಲಿ ನಡೆಯುತ್ತಿದ್ದ ಕಲಾಪದಲ್ಲಿ ಇವರೆಲ್ಲ ಮೂಕರು ಮತ್ತು ಕಿವುಡರು.
ಈ ಅವಕಾಶವನ್ನೇ ಬಳಸಿಕೊಂಡು ಗಮನಸೆಳೆದವರು ಬಿ.ನಾರಾಯಣ ರಾವ್.
“ಕಾಂಗ್ರೆಸ್ ಪಕ್ಷದ ಮುಖ್ಯ ಬಲ‌ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಜಾತಿಗಳು. ಅವರ ಬೆಂಬಲ ಇಲ್ಲದೆ ಇದ್ದಾಗ ಕಾಂಗ್ರೆಸ್ ಸೋತಿದೆ. ಅವರ ಬಲ‌ ಕಳೆದುಕೊಳ್ಳಬೇಡಿ’ ಎಂದು ನಿಜಾಮರ ನಾಡಿನ ನಿರರ್ಗಳ ಹಿಂದಿಯಲ್ಲಿ ಸೋನಿಯಾಗಾಂಧಿ ಅವರನ್ನು ನಾರಾಯಣ ರಾವ್ ಎಚ್ಚರಿಸಿದ್ದರು.
ಸೋನಿಯಾಗಾಂಧಿ ಬೆರಗಿನಿಂದ ಬಿಟ್ಟ ಕಣ್ಣಲ್ಲೇ ನಾರಾಯಣ ರಾವ್ ಅವರನ್ನು ನೋಡುತ್ತಲೇ ಇದ್ದದ್ದು ನನಗೆ ಈಗಲೂ ಸ್ಪಷ್ಟವಾಗಿ ನೆನಪಿದೆ.
ಇಂತಹ ಸಭೆಗಳಲ್ಲಿ ಸಾಮಾನ್ಯವಾಗಿ ಮೆರೆಯುವ ಹಿಂದಿವಾಲಾಗಳ ನಡುವೆ ನಮ್ಮ ಕನ್ನಡಿಗನೊಬ್ಬ ಎಲ್ಲರ ಗಮನಸೆಳೆದರಲ್ಲಾ ಎಂಬ ಖುಷಿ‌ ನನಗೆ.
ಅದೇ ಖುಷಿಯಲ್ಲಿ ಆ ಘಟನೆಯನ್ನು ಆ‌ ವಾರದ ನನ್ನ ಅಂಕಣದ‌‌ ಕೊನೆಯಲ್ಲಿನ ವಾರೆನೋಟದಲ್ಲಿ ಬರೆದು ಮುಂದಿನ‌ ಚುನಾವಣೆಯಲ್ಲಿ ಟಿಕೆಟ್ ಗ್ಯಾರಂಟಿ? ಎಂದು ಕಿಚಾಯಿಸಿದ್ದೆ. 
(ನಮ್ಮ ಕಿಲಾಡಿ ನಾರಾಯಣ ರಾವ್ ಅಂಕಣದಲ್ಲಿನ ತಮಗೆ ಸಂಬಂಧಿಸಿದ ಭಾಗವನ್ನು ದೊಡ್ಡದಾಗಿ ಪೋಸ್ಟರ್ ಮಾಡಿಸಿ ತಮ್ಮ‌ಕಚೇರಿಯಲ್ಲಿ ಹಾಕಿದ್ದರಂತೆ. ಆದರೂ ಬಡಪಾಯಿ ನಾರಾಯಣ ರಾವ್ ಶಾಸಕರಾಗಲು ಅದರ ನಂತರ ಹದಿನೈದು ವರ್ಷ ಬೇಕಾಯಿತು)
ಮೊನ್ನೆ ಅವರ ಮಾತು ಕೇಳಿ ಇದೆಲ್ಲ ನೆನಪಾಯ್ತು. (ಶಾಸಕ ನಾ.ರಾ. ಬಗ್ಗೆ ಪತ್ರಕರ್ತ ಅಮ್ಮಿನಮಟ್ಟು ಬರೆದದ್ದು)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *