breaking news-ಮೃತಪಟ್ಟ 8 ಗಂಟೆಯೊಳಗೆ ಪರಿಹಾರ ನೀಡಿದ ಉ.ಕ. ಜಿಲ್ಲಾಡಳಿತ!

ಇಂದು ಮುಂಜಾನೆ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ ಸಿದ್ಧಾಪುರ ಹುಸೂರಿನ ಶಶಿಧರ ನಾಯ್ಕ ಸಾವಿನ 8 ಗಂಟೆಯೊಳಗೆ ಅವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ದೊರೆತಿದೆ.
ಇಂದಿನ ದುರ್ಘಟನೆ ನಂತರ ತಡಮಾಡದೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಮರ ಬಿದ್ದು ಮೃತರಾದ ಶಶಿಧರ ನಾಯ್ಕ ಕುಟುಂಬಕ್ಕೆ ಸಂಜೆಯೊಳಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವು ದೊರಕಿಸಿದರು. ಈ ದಿಢೀರ್ ಕ್ರಮಕ್ಕೆ ಕಾರಣರಾದ ತಹಸಿಲ್ದಾರ ಮತ್ತು ಶಿರಸಿ ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಪ್ರಶಂಸೆ ದೊರೆತಿದೆ.
ಕಂದಾಯ ಇಲಾಖೆ ಸಿಬ್ಬಂದಿಗಳು ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದರಲ್ಲದೆ ಸರ್ಕಾರದ ಪರಿಹಾರ ಹಣದ ನಾಲ್ಕು ಲಕ್ಷ ಚೆಕ್ಕನ್ನು ಕುಟುಂಬಸ್ಥರಿಗೆ ಹಸ್ಥಾಂತರಿಸಿದರು.
ಕ್ರೈಂ ನ್ಯೂಸ್-
ಹೆಲ್ಮೆಟ್‍ನಿಂದ ತಪ್ಪಿದ ಅನಾಹುತ
ಸಿದ್ಧಾಪುರ,ಜು,23- ಹೆಲ್ಮೆಟ್ ಧರಿಸಿದ್ದ ಕಾರಣಕ್ಕೆ ಶಿಕ್ಷಕರೊಬ್ಬರು ಅಪಾಯದ ಅಪಘಾತದಿಂದ ಬಚಾವಾದ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಸೋಮುವಾರ ಸಿದ್ದಾಪುರ ಕಾನಗೋಡಿನ ಬಳಿ ನಡೆದ ಖಾಸಗಿ ಬಸ್ ಮತ್ತು ದ್ವಿಚಕ್ರವಾಹನ ಅಪಘಾತದಲ್ಲಿ ಅದೃಷ್ಟವಶಾತ್ ಬಚಾವಾದವರು ಕಾನಗೋಡಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರಾಜಕುಮಾರ ನಾಯ್ಕ.
ಈ ಆರ್.ಆರ್.ನಾಯ್ಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಈಗ ಚೇತರಿಸಿಕೊಂಡಿದ್ದಾರೆ. ಹೆಲ್ಮೆಟ್ ಧರಿಸಿರದಿದ್ದರೆ ತಲೆಗೆ ಬಿದ್ದ ಏಟು ಪ್ರಾಣಾಂತಿಕವಾಗುವ ಅಪಾಯದ ಸಾಧ್ಯತೆಗಳಿದ್ದವು. ಸಮಯಪ್ರಜ್ಞೆ ಮತ್ತು ಹೆಲ್ಮೆಟ್ ನಿಂದಾಗಿ ಅಪಾಯದಿಂದ ಪಾರಾದ ರಾಜಕುಮಾರ ನಾಯ್ಕ ಆರೋಗ್ಯವಾಗಿದ್ದಾರೆ.
ಮರಬಿದ್ದು ಅರಣ್ಯ ಇಲಾಖೆ ಸಿಬ್ಬಂದಿಮೃತ್ಯು
ಕರ್ತವ್ಯ ನಿರತ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಮರದ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 10 ರ ಸುಮಾರಿಗೆ ಸಿದ್ದಾಪುರದ ಮಾವಿನಗುಂಡಿ ಬಳಿ ನಡೆದಿದೆ.
ಮೃತ ನೌಕರರನ್ನು ಸಿದ್ದಾಪುರ ಹುಸೂರಿನ ಶಶಿಧರ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.
ಕರ್ತವ್ಯ ನಿರತ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮರ ಮುರಿದು ಬಿದ್ದ ವಿಷಯ ತಿಳಿಯುತ್ತಲೇ ಅರಣ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಧಾವಿಸಿದರಾದರೂ ಶಶಿಧರ ಸ್ಥಳದಲ್ಲೇ ಅಸುನೀಗಿದ್ದರು.
ಅರಣ್ಯ ಇಲಾಖೆಯ ಸಿಬ್ಬಂದಿಗಳು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಸಂಬಂಧಿಗಳೆಲ್ಲಾ ತಾಲೂಕಾ ಆಸ್ಫತ್ರೆ ಬಳಿ ಜಮಾಯಿಸಿದ್ದರು.
ಶಶಿಧರ ಇಲಾಖೆಯ ಕ್ಷೇಮಾಭಿವೃದ್ಧಿ ನೌಕರ ಎಂದು ಕೆಲಸಮಾಡುತಿದ್ದರು.ಇಂದು ಬೆಳಿಗ್ಗೆ ಎಂದಿನಂತೆ ಇಲಾಖೆಯ ಮಾವಿನಗುಂಡಿ ತಪಾಸಣಾ ನಾಕಾದಲ್ಲಿ ಕರ್ತವ್ಯ ನಿರತರಾಗಿದ್ದಾಗಲೇ ಈ ದುರ್ಘಟನೆ ನಡೆದಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ.
ಶಶಿಧರ ಮರಣದ ವಾರ್ತೆ ತಿಳಿಯುತ್ತಲೇ ಧಾವಿಸಿ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೃತರ ಸಂಬಂಧಿಗಳಿಂದ ಸಿದ್ಧಾಪುರದ ಆಸ್ಫತ್ರೆ ಆವರಣ ತುಂಬಿ ಹೋಗಿತ್ತು. ವೈಧ್ಯಕೀಯ ವಿಧಿ-ವಿಧಾನಗಳ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಶಶಿಧರರನ್ನು ಅವರ ಹುಟ್ಟೂರಲ್ಲಿ ಅಗ್ನಿಗೆ ಆಹುತಿ ಮಾಡಲಾಯಿತು. ಮೃತ ಶಶಿಧರರಿಗೆ ಪತ್ನಿ ಮತ್ತು ಪುತ್ರ ಹಾಗೂ ಅಪಾರ ಬಂಧು-ಬಳಗವಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *