ಕುಗ್ಗದ ಪ್ರವಾಹ, ಕಡಿದುಹೋದ ಸಂಪರ್ಕ, ಹಾಲಿ,ಮಾಜಿ ಸಭಾಪತಿಗಳಿಂದ ನೆರೆಪೀಡಿತ ಪ್ರದೇಶಗಳಭೇಟಿ

ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಿಸಿದ ಸಿದ್ಧಾಪುರ (ಉ.ಕ.) ತಾಲೂಕು ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ತುಸು ತಗ್ಗಿದರೂ ಪ್ರವಾಹದ ಸ್ಥಿತಿ ಮುಂದುವರಿದಿದೆ.
ಕರಾವಳಿಯನ್ನು ಉತ್ತರಕರ್ನಾಟಕದೊಂದಿಗೆ ಜೋಡಿಸುವ ಮಲೆನಾಡಿನ ಬಹುತೇಕ ರಸ್ತೆಗಳೆಲ್ಲಾ ಮರಬಿದ್ದು,ಧರೆಕುಸಿದು ಸಂಪರ್ಕ ಕಡಿದುಕೊಂಡಿವೆ. ಉತ್ತರಕನ್ನಡದಲ್ಲಿ ಹಳಿಯಾಳದಿಂದ ಪ್ರಾರಂಭವಾದ ಸೇತುವೆ ಮೇಲೆ ನೀರು ನಿಂತ ಸ್ಥಿತಿ ಅನೇಕ ಕಡೆ ಮುಂದುವರಿದಿದ್ದು ಯಲ್ಲಾಪುರ ತಾಲೂಕಿನ ಶಾಲ್ಮಲಾ ನದಿಯ ಬೇಡ್ತಿ ಸೇತುವೆ ಕುಸಿದು ಬಿದ್ದ ಪರಿಣಾಮ ಶಿರಸಿ-ಯಲ್ಲಾಪುರ ರಸ್ತೆ ಸಂಪರ್ಕ ಕಡಿದುಹೋಗಿದೆ.
ಮಲೆನಾಡಿನ ಡ್ಯಾಮ್‍ಗಳು ತುಂಬಿ ನೀರು ಬಿಡುವ ಅನಿವಾರ್ಯತೆ ಸೃಷ್ಟಿಯಾಗಿರುವುದರಿಂದ ಕರಾವಳಿಯಲ್ಲಿ ಪ್ರವಾಹದ ಭೀತಿ ಆವರಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೇ ನಿರಾಶ್ರಿತರ ಸಂಖ್ಯೆ 4ಸಾವಿರ ದಾಟಿದ್ದು ರಾಜ್ಯದಲ್ಲಿ ಈವಾರ ನಿರಾಶ್ರಿತರಾದವರ ಸಂಖ್ಯೆ 40 ಸಾವಿರ ದಾಟಿದೆ.
ಈ ತೊಂದರೆ ಹಿನ್ನೆಲೆಯಲ್ಲಿ ಮಾಜಿ ಸ್ಫೀಕರ್ ಕಾಗೋಡು ತಿಮ್ಮಪ್ಪ ತಮ್ಮ ಅನಾರೋಗ್ಯ, ವೈದ್ಯರ ಎಚ್ಚರಿಕೆ ಮಧ್ಯೆ ಹೊಸನಗರದ ರಿಪ್ಪನ್‍ಪೇಟೆ,ಸಾಗರದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿ ಸಂತೃಸ್ತರ ಅಹವಾಲು ಕೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿರುವ ಹಾಲಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಬೆಳಿಗ್ಗೆ ಸಿದ್ದಾಪುರ ತಾಲೂಕಿನ ಕಲ್ಯಾಣಪುರ, ಅಕ್ಕುಂಜಿಗಳಿಗೆ ಭೇಟಿ ನೀಡಿ ಸಂತೃಸ್ತರ ಅಹವಾಲು ಆಲಿಸಿದರು.
ಸ್ಥಳಿಯ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಸಂತೃಸ್ತರ ಪುನರ್ವಸತಿ ಕೇಂದ್ರಗಳ ಅವಸ್ಥೆ ಪರಿಶೀಲಿಸಿದರು. ಮಹಾಪೂರದ ಸಂದರ್ಭದಲ್ಲಿ ತೊಂದರೆಗೊಳಗಾಗುತ್ತಿರುವ ಈಭಾಗದ ಜನರ ಶಾಶ್ವತ ವಸತಿ ವ್ಯವಸ್ಥೆಗೆ ಸೂಕ್ತ ಏರ್ಪಾಡು ಮಾಡಲು ಪ್ರಯತ್ನಿಸುವ ಭರವಸೆ ನೀಡಿದರು.
ಸಾಂಕ್ರಾಮಿಕ ರೋಗದ ಎಚ್ಚರಿಕೆ- ಕಳೆದ 4-5 ದಿವಸಗಳ ನಿರಂತರ ಮಳೆ, ಮಹಾಪೂರಗಳ ಪರಿಣಾಮ ರಾಜ್ಯದೆಲ್ಲೆಡೆ ಸಂತೃಸ್ತರ ಸಂಖ್ಯೆ ಹೆಚ್ಚಿದ್ದು ಅವರಿಗೆ ವ್ಯವಸ್ಥೆ ಮಾಡಿರುವ ತಾತ್ಕಾಲಿಕ ಪುನರ್ವಸತಿ ಕೇಂದ್ರಗಳಲ್ಲಿ ಕಡಿಮೆ ಪ್ರದೇಶದಲ್ಲಿ ಹೆಚ್ಚಿನ ಜನರಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ನಿರಾಶ್ರಿತರ ಕೇಂದ್ರಗಳಲ್ಲಿ ಸಾಂಕ್ರಾಮಿಕ ರೋಗದ ಅಪಾಯವಿರುವುದರಿಂದ ಎಚ್ಚರಿಕೆಯಿಂದ ಆರೋಗ್ಯ ಅನುಕೂಲ ನಿರ್ವಹಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ.
ಭೀಮಣ್ಣ ನಾಯ್ಕ ಭೇಟಿ- ಈ ವಾರದ ಮಳೆ, ಮಹಾಪೂರಗಳಿಂದ ತೊಂದರೆಗೊಳಗಾಗಿರುವ ಪ್ರವಾಹ ಪೀಡಿತ ಪ್ರದೇಶಗಳಾದ ಶಿರಸಿಯ ಬನವಾಸಿ,ಮೊಗಳ್ಳಿ ಪ್ರದೇಶಗಳಿಗೆ ಗುರುವಾರ ಭೀಮಣ್ಣ ನಾಯ್ಕ ನೇತೃತ್ವದ ಜಿಲ್ಲಾ ಕಾಂಗ್ರೆಸ್ ತಂಡ ಭೇಟಿ ಮಾಡಿತು. ಇಂದು ಸಿದ್ಧಾಪುರ ತಾಲೂಕಿನ ಅಕ್ಕುಂಜಿ, ಕಲ್ಯಾಣಪುರ,ಹೆಮ್ಮನ ಬೈಲು ಪ್ರದೇಶಗಳಿಗೆ ಭೇಟಿ ನೀಡುವುದಾಗಿ ತಿಳಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *