ನೆರೆ ಸಂತ್ರಸ್ತರಿಗೆ ಆಶ್ರಯ ಒದಗಿಸಲು ಗೋಸ್ವರ್ಗದ ಬಾಗಿಲು ತೆರೆದಿದೆ

ಸಿದ್ದಾಪುರ; ಭೀಕರ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಶ್ರೀರಾಮಚಂದ್ರಾಪುರ ಮಠ ತನ್ನ ಸಹಾಯಹಸ್ತ ಚಾಚಿದ್ದು, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಭಾನ್ಕುಳಿಯಲ್ಲಿ ಇರುವ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಸ್ವ-ಇಚ್ಛೆಯಿಂದ ಆರಂಭಿಸಿದೆ. ಯಾವುದೇ ಸರ್ಕಾರಿ ನೆರವು ಅಥವಾ ಪ್ರತಿಫಲಾಪೇಕ್ಷೆ ಇಲ್ಲದೆ ಮಠ ತನ್ನ ಕರ್ತವ್ಯ ಎಂದು ಭಾವಿಸಿ ಈ ಕೇಂದ್ರ ಆರಂಭಿಸುತ್ತಿದೆ ಎಂದು ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದ್ದಾರೆ.
ಗಿರಿನಗರದ ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿರುವ ಶ್ರೀಗಳು ಶನಿವಾರ ಆಶೀರ್ವಚನದಲ್ಲಿ ಈ ವಿಷಯ ಪ್ರಕಟಿಸಿ
ರಾಜ್ಯದ ಜನ ಭೀಕರ ಪ್ರವಾಹದಿಂದ ತತ್ತರಿಸಿದ್ದಾರೆ. ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಕ್ಕೆ ಧುಮುಕಬೇಕಾದ ಸಮಯವಿದು. ಗೋಸ್ವರ್ಗದಲ್ಲಿ ಸಾವಿರಾರು ಮಂದಿಗೆ ಆಶ್ರಯ ನೀಡಲು ಸ್ಥಳಾವಕಾಶವಿದೆ. ಊಟೋಪಚಾರ ಒದಗಿಸಲು ವ್ಯವಸ್ಥೆಯಿದೆ. ಪ್ರವಾಹ ಸಂತ್ರಸ್ತರು ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಇದನ್ನು ಬಳಸಿಕೊಳ್ಳಬಹುದು. ಗೋಸ್ವರ್ಗವು ನೆರೆ ಸಂತ್ರಸ್ತರ ಪಾಲಿಗೂ ಸ್ವರ್ಗವಾಗಬೇಕು ಎನ್ನುವುದು ನಮ್ಮ ಬಯಕೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಇನ್ನೂ ಯಾವ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬ ಬಗ್ಗೆ ಮಠದಿಂದ ಚಿಂತನೆ ನಡೆದಿದೆ ಎಂದು ಶ್ರೀಗಳು ತಿಳಿಸಿದ್ದಾರೆ.
………………………………………………………………………………………………………………………………………………………………………
ಪರಿಹಾರ ಸಾಮಗ್ರಿ ಸಂಗ್ರಹ: ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ಸಂಗ್ರಹಕ್ಕೆ ಕೂಡಾ ಶ್ರೀಮಠ ವ್ಯವಸ್ಥೆ ಮಾಡಿದೆ. ಮಂಗಳೂರಿನ ನಂತೂರು ಶ್ರೀಭಾರತೀ ಸಮೂಹಸಂಸ್ಥೆಯ ಸೇವಾಸಮಿತಿ ಕಚೇರಿ, ಮಾಣಿಮಠ ಕಚೇರಿ, ಉತ್ತರ ಕನ್ನಡ ಜಿಲ್ಲೆಯ ಕೆಕ್ಕಾರು ಮಠ ಕಚೇರಿ, ಅಪ್ಸರಕೊಂಡ ಮಠದ ಕಚೇರಿ, ಭಾನ್ಕುಳಿ ಗೋಸ್ವರ್ಗ ಆವರಣದಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಸಂತ್ರಸ್ತರಿಗೆ ವಿತರಿಸಲಾಗುತ್ತದೆ.
ಎಲ್ಲರ ನಡಿಗೆ ಸಂತೃಸ್ತರ ಕಡೆಗೆ, ಭಾದಿತರ ನಡಿಗೆ ಮನೆ ಕಡೆಗೆ
ಕಳೆದ ವಾರದ ಮಳೆ, ಪ್ರವಾಹಗಳಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿಗಳೆಲ್ಲಾ ಪ್ರವಾಹದ ಮಹಾಪೂರದಲ್ಲಿ ಮುಳುಗಿವೆ.
ಈ ಪ್ರವಾಹ ಸಂತೃಸ್ತರ ನೆರವಿಗೆ ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಏಕವ್ಯಕ್ತಿ ಸರ್ಕಾರದಿಂದಾಗಿ ಜನರಿಗೆ ಸರಿಯಾದ ಸರ್ಕಾರದ ಸ್ಫಂದನ ನೆರವು ದೊರೆಯದ ಅಸಮಧಾನದ ನಡುವೆ ಸೆಲಿಬ್ರಿಟಿಗಳು, ಸಂಘ ಸಂಸ್ಥೆಗಳು ಭಾದಿತರ ಕಣ್ಣೊರೆಸುವ ಕೆಲಸ ಮಾಡುತ್ತಿವೆ.
ಉತ್ತರ ಕರ್ನಾಟಕದಲ್ಲಿ ಸ್ವಂತ ಶಿವರಾಜಕುಮಾರ ಮತ್ತು ಪುನೀತ್ ರಾಜಕುಮಾರ ನೆರವಿಗೆ ಧಾವಿಸಿದ್ದು ನಾವು ಸ್ಟಾರ್‍ಡಮ್ ಅನುಭವಿಸಲು ಕಾರಣ ಕನ್ನಡದ ಜನತೆ ಹಾಗಾಗಿ ನಾವು, ನಮ್ಮ ಅಭಿಮಾನಿಗಳು ಕಷ್ಟದಲ್ಲಿರುವ ಜನರ ಸೇವೆಗೆ ಧಾವಿಸುತ್ತೇವೆ ಎಂದಿದ್ದಾರೆ. ನಟ ವಿಜಯರಾಘವೇಂದ್ರ ಸೇರಿದಂತೆ ಅನೇಕ ನಟ,ನಟಿಯರು ಸಂತೃಸ್ತರ ಜೊತೆಗೆ ನಾವಿದ್ದೇವೆ ಎಂದು ಸಾರಿದ್ದಾರೆ.
ಇನ್ಫೋಸಿಸ್ ಸುಧಾಮೂರ್ತಿ ಸೇರಿದಂತೆ ಪ್ರಮುಖ ಉದ್ಯಮಿಗಳು ಕರ್ನಾಟಕದ ಪ್ರವಾಹ ಸಂತೃಸ್ತರ ನೆರವಿಗೆ ನಿಂತಿದ್ದಾರೆ. ಉತ್ತರಕನ್ನಡದಲ್ಲೂ ಸ್ಥಳಿಯ ಸಂಘ ಸಂಸ್ಥೆಗಳು ಸಂತೃಸ್ತರ ನೆರವಿಗೆ ಬಂದಿವೆ. ಶನಿವಾರ ಜಿಲ್ಲಾ ಕಾಂಗ್ರೆಸ್ ಸಮೀತಿ ಸಂತೃಸ್ತರ ಕೇಂದ್ರಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದೆ.
ಶಿರಸಿ ಎ.ಪಿ.ಎಂ.ಸಿ. ಅಧ್ಯಕ್ಷ ಸುನಿಲ್ ನಾಯ್ಕ ತಂಡ ತಾವು ಸಂಗ್ರಹಿಸಿದ ವಸ್ತುಗಳನ್ನು ಸಂತೃಸ್ತರ ಶಿಬಿರಗಳಿಗೆ ತೆರಳಿ ನೀಡಿದೆ. ಇಂದು ಆಳ್ವಾ ಫೌಂಡೇಶನ್ ಮತ್ತು ಭಾರತೀಯ ವೈದ್ಯಕೀಯ ಸಂಘಗಳು ಸಂತೃಸ್ತರನ್ನು ಸಂದರ್ಶಿಸಿ, ಉಪಚಾರ ನೀಡಿದ್ದಾರೆ.
ಸಿದ್ಧಾಪುರ ತಾ.ಪಂ. ಸದಸ್ಯ ನಾಶಿರ್‍ಖಾನ್ ಸಂತೃಸ್ತರೊಂದಿಗೆ ಕ್ಯಾಂಪ್ ಫೈರ್ ಮಾಡಿ ಹಾಡಿ ರಂಜಿಸುವ ಮೂಲಕ ಸಂತೃಸ್ತರ ಬವಣೆಗೆ ಮನೋರಂಜನೆಯ ಔಷದೋಪಚಾರ ಮಾಡಿದ್ದಾರೆ. ಅಂದಹಾಗೆ ಇಂದು ಮಳೆಯ ಆರ್ಭಟ ತಗ್ಗಿದ್ದು ಉತ್ತರ ಕನ್ನಡ ಜಿಲ್ಲೆಯ ಸಂತೃಸ್ತರ ನಡಿಗೆ ಮನೆಕಡೆಗೆ ಎನ್ನಲಡ್ಡಿಯೇನಿಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *