ವಾಡಿಕೆಗಿಂತ ಹೆಚ್ಚಿನ ಮಳೆ, ಸಂತೃಸ್ತರಿಗೆ ತಲಾ 10ಸಾ. ರೂ. ಪರಿಹಾರ ವಿತರಣೆ

ಸಿದ್ಧಾಪುರ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ, ಪ್ರವಾಹ ಸಂತೃಸ್ತರಿಗೆ 10 ಸಾವಿರ ನೆರವುನೀಡಿಕೆ ಸೇರಿದಂತೆ ಅನೇಕ ವಿಚಾರಗಳ ಚರ್ಚೆಗೆ ಇಂದಿನ ತಾಲೂಕಾ ಪಂಚಾಯತ್ ಸಭೆ ಸಾಕ್ಷಿಯಾಯಿತು.
ಸುಷ್ಮಾಸ್ವರಾಜ್ ಸಾವಿನ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ತಾ.ಪಂ. ಸಾಮಾನ್ಯ ಸಭೆ ಇಂದು ನಡೆಯಿತು. ಸಭೆಯಲ್ಲಿ ತಾಲೂಕಿನ ಮಹಾಮಳೆ, ಪ್ರವಾಹ, ತೊಂದರೆಗಳ ಸಮಯದಲ್ಲಿ ಸಹಕರಿಸಿದ ಜನಪ್ರತಿನಿಧಿಗಳು, ಸ್ಥಳಿಯರು, ಅಧಿಕಾರಿಗಳು ಪತ್ರಕರ್ತರನ್ನು ಅಭಿನಂದಿಸಿದ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ಮತ್ತು ಸದಸ್ಯ ನಾಶಿರ್‍ಖಾನ್ ಅನಿರೀಕ್ಷಿತ ಅವಗಢದಲ್ಲಿ ಸಾರ್ವಜನಿಕರು, ಆಡಳಿತ ವ್ಯವಸ್ಥೆ ಸೇರಿದಂತೆ ಇಡೀ ಸಮಾಜ ಸಂತೃಸ್ತರ ಪರವಾಗಿ ಮಿಡಿದಿದೆ. ಜೊತೆಗಿರುವವರು ತೊಂದರೆಯಲ್ಲಿದ್ದಾಗ ಇಂಥ ಸಹಕಾರ ಅವಶ್ಯ ಎಂದರು.
ಸಭೆಗೆ ಮಾಹಿತಿ ನೀಡಿದ ಕೃಷಿ ಅಧಿಕಾರಿ ಪ್ರಶಾಂತ್ ತಾಲೂಕಿನಲ್ಲಿ ವಾಡಿಕೆಯ2161ಮಿ.ಮೀ. ಮಳೆ ಬದಲು ಈವರೆಗೆ 3171 ಮಿಮೀ ಮಳೆ ಸುರಿದಿದೆ. ಮಾಹಿತಿ ನೀಡಿದ ಆಹಾರ ನಿರೀಕ್ಷಕ ಎನ್.ಆಯ್. ಗೌಡ ತಾಲೂಕಿನಲ್ಲಿ 36 ಕುಟುಂಬಗಳು ನಿರಾಶ್ರಿತರಾಗಿದ್ದು ಅವರಿಗೆ ತಾಲೂಕಿನ ಮೂರು ಕಡೆ ಸಂತೃಸ್ತರ ಕೇಂದ್ರಗಳನ್ನು ತೆರೆಯಲಾಗಿತ್ತು. ತಾಲೂಕಿನಲ್ಲಿ 2 ಜೀವಹಾನಿ, 2 ಜಾನುವಾರುಗಳ ಸಾವು ಸಂಭವಿಸಿವೆ. ಅವುಗಳಲ್ಲಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ, ಜಾನುವಾರು ಹಾನಿ ಬಗ್ಗೆ 52 ಸಾವಿರ ರೂ. ಪರಿಹಾರಕ್ಕಾಗಿ ಉಪವಿಭಾಗಾಧಿ ಕಾರಿಗಳಿಗೆ ವರದಿ ನೀಡಲಾಗಿದೆ. ತೊಂದರೆಗೊಳಗಾದ 72 ಮನೆಗಳಿಗೆ ಈವರೆಗೆ189500ರೂ. ನೀಡಲಾಗಿದೆ. ಸಂತೃಸ್ತರಿಗೆಆಹಾರ ಕಿಟ್ ಜೊತೆ 2 ಹಂತಗಳಲ್ಲಿ ತಲಾ ಹತ್ತುಸಾವಿರ ರೂಪಾಯಿ ನೀಡಲಾಗಿದೆ ಎಂದು ವಿವರ ನೀಡಿದರು.
ಸಿದ್ಧಾಪುರ ತಾಲೂಕಿನಾದ್ಯಂತ ಸುರಿದ ಮಳೆ, ಪ್ರವಾಹದ ಪರಿಣಾಮ ಅಂದಾಜು1301ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶವಾಗಿದೆ. ಈ ಹಾನಿಯ ಅಂದಾಜು 43 ಕೋಟಿ ಎಂದು ಪ್ರಾಥಮಿಕ ಸಮೀಕ್ಷೆ ಮಾಡಲಾಗಿದೆ. ತಾಲೂಕಿನ11640 ತೋಟಗಾರ ರೈತರಲ್ಲಿ11126 ರೈತರು ಬೆಳೆವಿಮೆ ಮಾಡಿಸಿದ್ದಾರೆ. ಇವರಿಗೆ ಕಳೆದ ವರ್ಷದ ಬೆಳೆವಿಮೆ ಪರಿಹಾರಸೆಪ್ಟೆಂಬರ್ 15 ರ ಒಳಗೆ ಬರಲಿದೆ. ಈ ವರ್ಷದ ಬೆಳೆಹಾನಿ ವಿಮಾ ಪರಿಹಾರ ಮುಂದಿನವರ್ಷ ದೊರೆಯಲಿದೆ.-ಮಹಾಬಲೇಶ್ವರ ಬಿ.ಎಸ್. (ಹಿ.ತೋ.ನಿ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *