ಉದ್ಘಾಟನೆ,ಶಂಕುಸ್ಥಾಪನೆ ಶಾಸಕರಿಗೆ ಮನವಿ ನೀಡಿಪರಿಹಾರ ಕೋರಿದ ವಿದ್ಯಾರ್ಥಿಗಳು

ಉದ್ಘಾಟನೆ,ಶಂಕುಸ್ಥಾಪನೆ ಶಾಸಕರಿಗೆ ಮನವಿ ನೀಡಿಪರಿಹಾರ ಕೋರಿದ ವಿದ್ಯಾರ್ಥಿಗಳು
ಸರಕಾರಿ ಕಾಲೇಜ್ ಹೆಚ್ಚುವರಿ ಕೊಠಡಿಗೆ ಶಿಲಾನ್ಯಾಸ
ಸಿದ್ಧಾಪುರ ತಾಲೂಕಿನ ಬೇಡ್ಕಣಿ ಸರಕಾರಿ ಪ್ರಥಮದರ್ಜೆ ಕಾಲೇಜ್‍ಗೆ 4.55ಕೋಟಿರೂ.ವೆಚ್ಚದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಇಲ್ಲಿಯ ಕಾಲೇಜ್‍ಗೆ ವಿಶಾಲವಾದ ಜಾಗವಿದೆ ಇಲ್ಲಿ ಸಾಕಷ್ಟು ಸಮಸ್ಯೆ ಇದೆ ಹೊಸ ಜಾಗದಲ್ಲಿ ಯಾವುದೇ ಸಂಸ್ಥೆಪ್ರಾರಂಭವಾದರೂ ಸಮಸ್ಯೆ ಇರುವುದು ಸಹಜ ಇದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು ಕಾಲೇಜ್ ಪ್ರಾರಂಭವಾದ ನಂತರ ಹೊಸ ಸರಕಾರ ಬಂದಿದ್ದ ಕಾರಣ ಕೆಲವು ಸಮಸ್ಯೆ ಬಗೆಹರಿಸಲು ಆಗಿಲ್ಲ ಇಲ್ಲಿಯ ಬಸ್‍ಗಳ ಸಮಸ್ಯೆ, ರಸ್ತೆಯ ಸಮಸ್ಯೆ,ಗ್ರಂಥಾಲಯದ ಸಮಸ್ಯೆ ಇದೆ 2 ಕೋಟಿರೂ.ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದ್ದು ಪುನಃ 4.55ಕೋಟಿರೂ. ವೆಚ್ಚದಲ್ಲಿ ಇನ್ನೂ 10 ಕೊಠಡಿಗಳು ನಿರ್ಮಾಣವಾಗುತ್ತಿವೆ. ಇಲ್ಲಿಯ ಸಮಸ್ಯೆಯನ್ನು ರಾಜಕೀಯವಾಗಿ ಬಳಿಸಿಕೊಳ್ಳುವ ಪ್ರಯತ್ನ ಬೇಡ ಎಲ್ಲರೂ ಸೇರಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ತಾಪಂ ಅಧ್ಯಕ್ಷ ಸುಧೀರ್ ಗೌಡರ್ ಮಾತನಾಡಿದರು.ಸಭೆಯಲ್ಲಿ ಜಿಪಂ ಸದಸ್ಯ ನಾಗರಾಜ ನಾಯ್ಕ,ಎಂ.ಜಿ.ಹೆಗಡೆ ಗೆಜ್ಜೆ,ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ತಹಸೀಲ್ದಾರ ಗೀತಾ ಸಿ.ಜಿ.,ಪ್ರಾಚಾರ್ಯ ಎಸ್.ಜಿ.ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ಪ್ರೋ.ಅರುಣ ಪ್ರಸಾದ ಸ್ವಾಗತಿಸಿದರು.
ಇದಕ್ಕೂ ಮೊದಲು ಕಾಲೇಜ್ ವಿದ್ಯಾರ್ಥಿಗಳು ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಇಲ್ಲಿಯ ಬಸ್‍ಸಮಸ್ಯೆಯ ಬಗ್ಗೆ,ಗ್ರಂಥಾಲಯ ಇಲ್ಲದಿರುವುದು,ಕ್ಯಾಂಟಿನ್ ಹಾಗೂ ಬಸ್‍ನಿಲ್ದಾಣದ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾಗೇರಿ ಇಲ್ಲಿಯ ಸಮಸ್ಯೆಯ ಬಗ್ಗೆ ನನಗೆ ಅರಿವಿದೆ ಇನ್ನು ಕೆಲವೇ ದಿನದಲ್ಲಿ ಇಲ್ಲಿಯ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *