
ರಾಜ್ಯದ 15 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಸ್ಫರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯ ಪಟ್ಟಿ ಬಿಡುಗಡೆಯಾಗಿದೆ. ಆ ಪಟ್ಟಿಯಲ್ಲಿ ಉತ್ತರಕನ್ನಡದ ಯಲ್ಲಾಪುರ ಕ್ಷೇತ್ರದ ಅಭ್ಯರ್ಥಿ ಡಿ.ಸಿ.ಸಿ.ಅಧ್ಯಕ್ಷ ಭೀಮಣ್ಣ ನಾಯ್ಕ ಎನ್ನಲಾಗಿದೆ. ಯಲ್ಲಾಪುರ ಕ್ಷೇತ್ರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ ಇಂದು ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೇಟ್ ಆಕಾಂಕ್ಷಿಯಾದ ಮಾಜಿ ಸಚಿವ ವಿ.ಎಸ್.ಪಾಟೀಲ್ ಜೊತೆ ಸಾರ್ವಜನಿಕ ಸಭೆ ನಡೆಸಿ ಎಲ್ಲರ ಬೆಂಬಲ ಕೋರಿದ್ದಾರೆ.

