

ಇಂದು ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಚುನಾವಣೆಯ ಭಾಷಣ ಮಾಡಿದರು . ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿ ನಂತರ ರಾಜೀನಾಮೆ ನೀಡಿ ಈಗ ಬಿ.ಜೆ.ಪಿ.ಯಿಂದ ಸ್ಫರ್ಧಿಸಲಿರುವ ಅನರ್ಹ ಶಾಸಕ ಶಿವರಾಮ ಹೆಬ್ಬಾರರ ವಿರುದ್ಧ ಕಾಂಗ್ರೆಸ್ ನಿಂದ ಸ್ಫರ್ಧಿಸುತ್ತಿರುವ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಪರವಾಗಿ ಸಿದ್ಧರಾಮಯ್ಯ ಪ್ರಚಾರ ಭಾಷಣ ಮಾಡಿದರು.
ಪ್ರತಿಭಟನೆ-
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮತ್ತು ಸಿದ್ದಾಪುರದ ಬ್ಯಾಂಕ್ ಸೇರಿದ ಹಣಕಾಸು ಸಂಸ್ಥೆಗಳಲ್ಲಿ ಕನ್ನಡದ ಸಿಬ್ಬಂದಿಗಳನ್ನೇ ನೇಮಕ ಮಾಡಬೇಕು ಎನ್ನುವ ಪ್ರಮುಖ ಬೇಡಿಕೆಗಳೊಂದಿಗೆ ಕೆಲವು ಬೇಡಿಕೆಗಳಿಗೆ ಆಗ್ರಹಿಸಿ ಇಂದು ಸಿದ್ಧಾಪುರದಲ್ಲಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಯಿತು.
ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ಬಹುತೇಕ ಎಲ್ಲಾ ಬ್ಯಾಂಕ್ ಹಣಕಾಸು ಸಂಸ್ಥೆಗಳಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ, ಕನ್ನಡಿಗರ ಅವಗಣನೆ ಸೇರಿದಂತೆ ಸ್ಥಳಿಯರು, ಕನ್ನಡ ಅವಗಣನೆ ವಿರೋಧಿಸಿ, ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನಾ ಮೆರವಣಿಗೆ ನಗರದ ಗಾರ್ಡ್ನ್ ವೃತ್ತದಿಂದ ಹೊರಟು ಸಿಂಡಿಕೇಟ್ ಬ್ಯಾಂಕ್ ಬಳಿ ಸಮಾವೇಶಗೊಳ್ಳುವ ಮೊದಲು ಭಾರತೀಯ ಸ್ಟೇಟ್ ಬ್ಯಾಂಕ್. ವಿಜಯ ಬ್ಯಾಂಕ್ ಗಳಿಗೆ ಮನವಿ ನೀಡಿ ಬ್ಯಾಂಕ್ ಗಳಿಂದ ಸ್ಥಳಿಯರಿಗೆ ಆಗುತ್ತಿರುವ ತೊಂದರೆ ಬಗೆಹರಿಸುವಂತೆ ಆಗ್ರಹಿಸಲಾಯಿತು.
ಕನ್ನಡಸಂಘಟನೆಗಳ ನೇತೃತ್ವದ ಈ ಪ್ರತಿಭಟನೆಯಲ್ಲಿ ನೀಡಿದ ಮನವಿ ಸ್ವೀಕರಿಸಿದ ಬ್ಯಾಂಕ್ ಸಿಬ್ಬಂದಿಗಳು ಸಂಘಟನೆಗಳ ಆಗ್ರಹ ಮತ್ತು ಸ್ಥಳಿಯರು, ಗ್ರಾಹಕರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.
ಬ್ಯಾಂಕ್‌ಗಳು ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸುವುದು,ಬ್ಯಾಂಕಿನಿAದ ಗ್ರಾಹಕರಿಗಾಗುತ್ತಿರುವ ತೊಂದರೆ ತಪ್ಪಿಸುವ ಹಲವು ಬೇಡಿಕೆಗಳ ಮನವಿ ಪತ್ರವನ್ನು ಬ್ಯಾಂಕ್ ಗಳೊಂದಿಗೆ ಸರ್ಕಾರಕ್ಕೂ ನೀಡಲಾಯಿತು. ಮುಂದಿನ ಒಂದು ವಾರದೊಳಗೆ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಧರಣಿ ಸತ್ಯಾಗ್ರಹ ಮತ್ತು ಬ್ಯಾಂಕ್ ಲಾಕ್ ಔಟ್ ಮಾಡುವ ಮೂಲಕ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಯಿತು.

