

ಇಂದು ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಚುನಾವಣೆಯ ಭಾಷಣ ಮಾಡಲಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿ ನಂತರ ರಾಜೀನಾಮೆ ನೀಡಿ ಈಗ ಬಿ.ಜೆ.ಪಿ.ಯಿಂದ ಸ್ಫರ್ಧಿಸಲಿರುವ ಅನರ್ಹ ಶಾಸಕ ಶಿವರಾಮ ಹೆಬ್ಬಾರರ ವಿರುದ್ಧ ಕಾಂಗ್ರೆಸ್ ನಿಂದ ಸ್ಫರ್ಧಿಸುತ್ತಿರುವ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಪರವಾಗಿ ಸಿದ್ಧರಾಮಯ್ಯ ಪ್ರಚಾರ ಭಾಷಣ ಮಾಡಲಿದ್ದಾರೆ.
ಪ್ರತಿಭಟನೆ- ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮತ್ತು ಸಿದ್ದಾಪುರದ ಬ್ಯಾಂಕ್ ಸೇರಿದ ಹಣಕಾಸು ಸಂಸ್ಥೆಗಳಲ್ಲಿ ಕನ್ನಡದ ಸಿಬ್ಬಂದಿಗಳನ್ನೇ ನೇಮಕ ಮಾಡಬೇಕು ಎನ್ನುವ ಪ್ರಮುಖ ಬೇಡಿಕೆಗಳೊಂದಿಗೆ ಕೆಲವು ಬೇಡಿಕೆಗಳಿಗೆ ಆಗ್ರಹಿಸಿ ಇಂದು ಸಿದ್ಧಾಪುರದಲ್ಲಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಯುತ್ತಿದೆ.
ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ಬಹುತೇಕ ಎಲ್ಲಾ ಬ್ಯಾಂಕ್ ಹಣಕಾಸು ಸಂಸ್ಥೆಗಳಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ, ಕನ್ನಡಿಗರ ಅವಗಣನೆ ಸೇರಿದಂತೆ ಸ್ಥಳಿಯರು, ಕನ್ನಡ ಅವಗಣನೆ ವಿರೋಧಿಸಿ, ಪ್ರತಿಭಟನೆ ಮಾಡಲಾಗುತ್ತಿದೆ. ಪ್ರತಿಭಟನಾ ಮೆರವಣಿಗೆ ನಗರದ ಗಾರ್ಡ್ನ್ ವೃತ್ತದಿಂದ ಹೊರಟು ಸಿಂಡಿಕೇಟ್ ಬ್ಯಾಂಕ್ ಬಳಿ ಸಮಾವೇಶಗೊಳ್ಳಲಿದೆ.




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






