ಮುಂಡಗೋಡಿನಲ್ಲಿ ಟಗರು ಸಿದ್ಧರಾಮಯ್ಯ ಪೊಗರು, ಸಿದ್ಧಾಪುರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ,ಎಚ್ಚರಿಕೆ

ಇಂದು ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಚುನಾವಣೆಯ ಭಾಷಣ ಮಾಡಿದರು . ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿ ನಂತರ ರಾಜೀನಾಮೆ ನೀಡಿ ಈಗ ಬಿ.ಜೆ.ಪಿ.ಯಿಂದ ಸ್ಫರ್ಧಿಸಲಿರುವ ಅನರ್ಹ ಶಾಸಕ ಶಿವರಾಮ ಹೆಬ್ಬಾರರ ವಿರುದ್ಧ ಕಾಂಗ್ರೆಸ್ ನಿಂದ ಸ್ಫರ್ಧಿಸುತ್ತಿರುವ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಪರವಾಗಿ ಸಿದ್ಧರಾಮಯ್ಯ ಪ್ರಚಾರ ಭಾಷಣ ಮಾಡಿದರು.
ಪ್ರತಿಭಟನೆ-
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮತ್ತು ಸಿದ್ದಾಪುರದ ಬ್ಯಾಂಕ್ ಸೇರಿದ ಹಣಕಾಸು ಸಂಸ್ಥೆಗಳಲ್ಲಿ ಕನ್ನಡದ ಸಿಬ್ಬಂದಿಗಳನ್ನೇ ನೇಮಕ ಮಾಡಬೇಕು ಎನ್ನುವ ಪ್ರಮುಖ ಬೇಡಿಕೆಗಳೊಂದಿಗೆ ಕೆಲವು ಬೇಡಿಕೆಗಳಿಗೆ ಆಗ್ರಹಿಸಿ ಇಂದು ಸಿದ್ಧಾಪುರದಲ್ಲಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಯಿತು.
ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ಬಹುತೇಕ ಎಲ್ಲಾ ಬ್ಯಾಂಕ್ ಹಣಕಾಸು ಸಂಸ್ಥೆಗಳಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ, ಕನ್ನಡಿಗರ ಅವಗಣನೆ ಸೇರಿದಂತೆ ಸ್ಥಳಿಯರು, ಕನ್ನಡ ಅವಗಣನೆ ವಿರೋಧಿಸಿ, ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನಾ ಮೆರವಣಿಗೆ ನಗರದ ಗಾರ್ಡ್ನ್ ವೃತ್ತದಿಂದ ಹೊರಟು ಸಿಂಡಿಕೇಟ್ ಬ್ಯಾಂಕ್ ಬಳಿ ಸಮಾವೇಶಗೊಳ್ಳುವ ಮೊದಲು ಭಾರತೀಯ ಸ್ಟೇಟ್ ಬ್ಯಾಂಕ್. ವಿಜಯ ಬ್ಯಾಂಕ್ ಗಳಿಗೆ ಮನವಿ ನೀಡಿ ಬ್ಯಾಂಕ್ ಗಳಿಂದ ಸ್ಥಳಿಯರಿಗೆ ಆಗುತ್ತಿರುವ ತೊಂದರೆ ಬಗೆಹರಿಸುವಂತೆ ಆಗ್ರಹಿಸಲಾಯಿತು.
ಕನ್ನಡಸಂಘಟನೆಗಳ ನೇತೃತ್ವದ ಈ ಪ್ರತಿಭಟನೆಯಲ್ಲಿ ನೀಡಿದ ಮನವಿ ಸ್ವೀಕರಿಸಿದ ಬ್ಯಾಂಕ್ ಸಿಬ್ಬಂದಿಗಳು ಸಂಘಟನೆಗಳ ಆಗ್ರಹ ಮತ್ತು ಸ್ಥಳಿಯರು, ಗ್ರಾಹಕರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.
ಬ್ಯಾಂಕ್‌ಗಳು ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸುವುದು,ಬ್ಯಾಂಕಿನಿAದ ಗ್ರಾಹಕರಿಗಾಗುತ್ತಿರುವ ತೊಂದರೆ ತಪ್ಪಿಸುವ ಹಲವು ಬೇಡಿಕೆಗಳ ಮನವಿ ಪತ್ರವನ್ನು ಬ್ಯಾಂಕ್ ಗಳೊಂದಿಗೆ ಸರ್ಕಾರಕ್ಕೂ ನೀಡಲಾಯಿತು. ಮುಂದಿನ ಒಂದು ವಾರದೊಳಗೆ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಧರಣಿ ಸತ್ಯಾಗ್ರಹ ಮತ್ತು ಬ್ಯಾಂಕ್ ಲಾಕ್ ಔಟ್ ಮಾಡುವ ಮೂಲಕ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *