ಉಪದೇಶ ಅನುಷ್ಠಾನವನ್ನೂ ವಿದೇಶಿಯರಿಂದಲೇ ಕಲಿಯಬೇಕು -ಶಾಸ್ರ್ತೀ

ಭಾರತೀಯರು ಉಪದೇಶಿಸುತ್ತಾರೆ.ಪಾಶ್ಚಾತ್ಯರು ಅನುಷ್ಠಾನ ಮಾಡುತ್ತಾರೆ ಎಂದು ಮಾರ್ಮಿಕವಾಗಿ ನುಡಿದಿರುವ ಹಿರಿಯ ಇತಿಹಾಸ ತಜ್ಞ ಎ.ಕೆ.ಶಾಸ್ತ್ರಿ ಭಾರತದಲ್ಲಿ ರಾಜಕಾರಣದಿಂದ ಮೊದಲ್ಗೊಂಡು ಎಲ್ಲಾ ಕ್ಷೇತ್ರಗಳೂ ವಿಶ್ವಾಸಾರ್ಹವಾಗಿ ಉಳಿದಿಲ್ಲ. ವಿದೇಶಿಯರಿಂದ ಉತ್ತಮದ್ದನ್ನು ಕಲಿಯುವ ಮೂಲಕ ನಾವು ಇತರರಿಗೆ ಮಾದರಿಯಾಗಬೇಕು ಎಂದು ಕರೆನೀಡಿದರು.
ಇಲ್ಲಿಯ ಎಸ್.ವಿ. ಹೈಸ್ಕೂಲು ಮೈದಾನದಲ್ಲಿ ಪ್ರಾರಂಭವಾದ ಶಿಕ್ಷಣ ಪ್ರಸಾರಕ ಸಮೀತಿಯ ಅಕ್ಷರ ಜಾತ್ರೆ ಉದ್ಘಾಟಿಸಿ ಮಾತನಾಡಿದ ಅವರು ಸಿದ್ಧಾಪುರದಂಥ ಸಣ್ಣ ನಗರದಲ್ಲಿ ಎಲ್ಲಾ ಸೌಕರ್ಯಗಳ ವಿದ್ಯಾಸಂಸ್ಥೆ ನಡೆಸುವುದು ಕಷ್ಟ ಆದರೆ ಗಣೇಶ್‍ಹೆಗಡೆಯವರ ದೊಡ್ಮನೆ ಕುಟುಂಬ ಈ ಊರಲ್ಲಿ ಜನರ ಅಗತ್ಯ ಪೂರೈಸಿದ್ದಾರೆ ಎಂದು ಶ್ಲಾಘಿಸಿದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಶಿಕ್ಷಣ ಪ್ರಸಾರಕ ಸಮೀತಿಯ ಉಪಾಧ್ಯಕ್ಷ ಡಾ. ಶಶಿಭೂಷಣ ಹೆಗಡೆ ಅಕ್ಷರ ಅವ್ಯವಸ್ಥೆ ಸುಧಾರಿಸುವ ಸಾಧನ ಅಕ್ಷರ ಜಾತ್ರೆಯಲ್ಲಿ ಶಿಕ್ಷಣದ ಮಹತ್ವ ತಿಳಿಸುವುದೇ ಉದ್ಧೇಶ ಎಂದರು.

ಗೋಪಾಲ ಕಾನಳ್ಳಿಗೆ ಕರುನಾಡಕಣ್ಮಣಿ
ಕನ್ನಡರಾಜ್ಯೋತ್ಸವ ಪ್ರಶಸ್ತಿ
ಸಿದ್ದಾಪುರ; ತಾಲೂಕಿನ ಉದಯೋನ್ಮುಖ ಕಲಾವಿದ, ಗಾಯಕ ಗೋಪಾಲ ಆರ್ ಕಾನಳ್ಳಿಯವರಿಗೆ “ಕರುನಾಡಕಣ್ಮಣಿಕನ್ನಡರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿಗೌರವಿಸಲಾಗಿದೆ.
ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸುರ್ವೆಕಲ್ಚರಲ್‍ಅಕಾಡೆಮಿ(ರಿ), ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(ರಿ) ಡಿಸೆಂಬರ್ 12 ರಂದು ಆಯೋಜಿಸಿದ್ದ 64 ನೇ ಕನ್ನಡರಾಜ್ಯೋತ್ಸವ ಸಂಭ್ರಮದ ಸಾಂಸ್ಕøತಿಕ ಪ್ರತಿಭೋತ್ಸವಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.
ಅವರು ಸುಮಾರು 10 ವರ್ಷಗಳಿಂದ ಯುವಜನ ಮೇಳ, ಬೀದಿನಾಟಕಗಳು, ನಾಡ, ರಾಷ್ಟ್ರೀಯ ಹಬ್ಬಗಳು, ಶಾಲಾ ಕಾಲೇಜುಗಳಲ್ಲಿಯ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತಮ್ಮದೆ ವಿಶಿಷ್ಟ ಕಂಠದಲ್ಲಿ ಹಾಡಿ ರಂಜಿಸುತ್ತಿದ್ದಾರೆ.

ವಿಧಾನಸಭಾ ಅಧ್ಯಕ್ಷ ಕಾಗೇರಿ
& ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ
ಹೊಸವರ್ಷದ ಮೊದಲವಾರ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ
ರೈತರು,ಬಡವರು, ಹಿಂದುಳಿದವರು,ಹಿರಿಯನಾಗರಿಕರ ತೊಂದರೆ,ಬೇಡಿಕೆಗಳಿಗೆ ಸ್ಫಂದಿಸದ ಸ್ಥಳಿಯ ಶಾಸಕರು,ಸಂಸದರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ (ಸಿದ್ಧಾಪುರ) ಬಿ.ಬಣ ಸಿಡಿದೆದ್ದಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *