ಡಾ.ಸಿದ್ಧಲಿಂಗಯ್ಯ ನೆನಪು- ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿಶಾಲೆಗಳಲ್ಲಿ ಕಲಿಯಲು ಆದೇಶವಾಗಬೇಕು

ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಓದಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಬೇಕು. ಇಂಗ್ಲೀಷ್ ಒಂದು ಭಾಷೆಯಾಗಿ ಕಲಿಕಾಪಠ್ಯವಾಗಬೇಕೆ ಹೊರತು ಇಂಗ್ಲೀಷ್ ಮಾಧ್ಯಮದಲ್ಲಿ ಓದುವುದರಿಂದ ಮಕ್ಕಳು ತ್ರಿಶಂಕು ಸ್ಥಿತಿಗೆ ತಲುಪಿದಂತಾಗುತ್ತದೆ. ಈ ಬಗ್ಗೆ ಪಾಲಕರು ಸಹಕರಿಸಬೇಕು ಎಂದು ಬಂಡಾಯ ಸಾಹಿತಿ ಮತ್ತು ಪಂಪ ಪ್ರಶಸ್ತಿ ಪುರಸ್ಕೃತ ಕವಿ ಡಾ.ಸಿದ್ಧಲಿಂಗಯ್ಯ ಹೇಳಿದ್ದಾರೆ.
ಬನವಾಸಿ ಕದಂಬೋತ್ಸವಕ್ಕೆ ಬಂದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಕನ್ನಡ ಶಾಲೆಗಳ ಸ್ಥಿತಿ ಸುಧಾರಿಸಬೇಕು.ಇಂಗ್ಲೀಷ ಭಾಷೆಯಾಗಿ ಕಲಿಸಬೇಕು. ಆಂಗ್ಲಮಾಧ್ಯಮದಿಂದ ಒಳ್ಳೆಯದಾಗುತ್ತೆ ಎನ್ನುವ ಬೃಮೆ ಸರಿಯಲ್ಲ ಎಂದರು.

ಕಳಚಿದ ಸಾಹಿತ್ಯ ಲೋಕದ ಕೊಂಡಿ: ಕವಿ ಡಾ. ಸಿದ್ದಲಿಂಗಯ್ಯ ಕೊರೋನಾದಿಂದ ನಿಧನ

ಕಳೆದೊಂದು ತಿಂಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ದಲಿತ ಕವಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ (66) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಬೆಂಗಳೂರು: ಕಳೆದೊಂದು ತಿಂಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ದಲಿತ ಕವಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ (66) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಇವರು ಮಣಿಪಾಲ್‌ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ದಲಿತರ ಧ್ವನಿಯಾಗಿದ್ದ ಸಿದ್ದಲಿಂಗಯ್ಯ, ದಲಿತ ಬಂಡಾಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ರಾಜ್ಯದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಸಾಮಾಜಿಕ ಸಮಾನತೆಯ ಕವನ ರಚಿಸಿದ್ದರು. 

ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದ ಸಿದ್ದಲಿಂಗಯ್ಯ ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು

ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ‘ಮಾಗಡಿ’ ತಾಲ್ಲೋಕಿನ ‘ಮಂಚನಬೆಲೆ’ ಗ್ರಾಮದಲ್ಲಿ ೧೯೫೪ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರ ಕವಿತೆಗಳು, ಸಮಕಾಲೀನ ಕನ್ನಡ ಕವಿತೆ ಭಾಗ-೩,೪ (ಸಂಪಾದನೆ ಇತರರೊಂದಿಗೆ), ಏಕಲವ್ಯ, ನೆಲಸಮ, ಪಂಚಮ, ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1 ಮತ್ತು ಭಾಗ 2, ಆತ್ಮಕಥೆಯಾದ ಊರುಕೇರಿ- ಭಾಗ-1 ಮತ್ತು ಬಾಗ 2 ಸೇರಿ ಅನೇಕ ಕೃತಿಗಳನ್ನು ಸಿದ್ದಲಿಂಗಯ್ಯ ರಚಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿಗಳಿಗೆ ಭಾಜನವಾಗಿದ್ದ ಸಿದ್ದಲಿಂಗಯ್ಯನವರು ಶ್ರವಣಬೆಳಗೊಳದಲ್ಲಿ ನಡೆದ ೮೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *