
ಸಿದ್ದಾಪುರ
ತಾಲೂಕಿನ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಾಣಿಕಟ್ಟಾ ದ ಮುಂದಿನ ಐದು ವರ್ಷದ ಅವಧಿಗಾಗಿ ಎನ್.ಬಿ.ಹೆಗಡೆ ಮತ್ತಿಹಳ್ಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಉಪಾಧ್ಯಕ್ಷರ ಆಯ್ಕೆ ನಡೆಯಲಿಲ್ಲ. ಚುನಾವಣಾಧಿಕಾರಿಯಾಗಿ ತಾಲೂಕು ಕೃಷಿ ಅಧಿಕಾರಿ ಪ್ರಶಾಂತ ಜಿ.ಎಸ್.ಕಾರ್ಯನಿರ್ವಹಿಸಿದ್ದರು.

ಬಿ.ಜೆ.ಪಿ. ಕಾರ್ಯಕರ್ತರ ಸಿಟ್ಟಿಗೆ ಗುರಿಯಾದ ಸ್ಪೀಕರ್ ಕಾಗೇರಿ
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪಕ್ಷದ ಪ್ರಮುಖರಿಂದಲೇ ಬಹಿರಂಗ ತರಾಟೆಗೆ ಗುರಿಯಾದ ಪ್ರಕರಣ ಇಂದು ಸಿದ್ಧಾಪುರದಲ್ಲಿ ನಡೆದಿದೆ.ಕಾರ್ಯಕರ್ತರ ಅವಗಣನೆ, ಅಭಿವೃದ್ಧಿಕಾರ್ಯಗಳ ನಿರ್ಲಕ್ಷದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸದಸ್ಯರು, ಜನಪ್ರತಿನಿಧಿಗಳೇ ಬಹಿರಂಗವಾಗಿ ವಿಧಾನಸಭಾ ಅಧ್ಯಕ್ಷರನ್ನುತರಾಟೆಗೆ ತೆಗೆದುಕೊಂಡ ಬಗ್ಗೆ ಮಾಹಿತಿ ನೀಡಿದ್ದಾರೆ.
