
2019 ನೇ ಸಾಲಿನ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ’ಗೆ ಮಹಾಂತಪ್ಪ ನಂದೂರ ಅವರ ‘ಅರಿವೇ ಪ್ರಮಾಣು’ ಕಾವ್ಯ ಕೃತಿ ಆಯ್ಕೆಯಾಗಿದೆ ಎಂದು ನವಚೇತನ ಸಾಂಸ್ಕೃತಿಕ ಕಲಾ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಂಜುನಾಥ ಪಟಗಾರ ತಿಳಿಸಿದ್ದಾರೆ.
ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ ಕೊಡಮಾಡುವ ಈ ಪ್ರಶಸ್ತಿಯು ರೂ. 10,000 ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನಗಳನ್ನೊಳಗೊಂಡಿದ್ದು, ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಗದಗಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ಪ್ರಸ್ತುತ ಸಾಲಿನಲ್ಲಿ ಪ್ರಶಸ್ತಿಗೆ ರಾಜ್ಯದ ವಿವಿಧ ಕಡೆಗಳಿಂದ 60 ಕೃತಿಗಳು ಬಂದಿದ್ದು, ಕೊನೆಗೆ ‘ಅರಿವೇ ಪ್ರಮಾಣು’ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪಟಗಾರ ಮಾಹಿತಿ ನೀಡಿದ್ದಾರೆ.

