ಮಧ್ಯಪ್ರದೇಶದ ಸರ್ಕಾರ ಪಥನ, ಸಂವಿಧಾನವಿರೋಧಿ ಕೃತ್ಯ ಎಂದ ಕಮಲ್‌ನಾಥ

ಕಳೆದ ೧೫ ತಿಂಗಳ ಹಿಂದೆ ಅಸ್ಥಿತ್ವಕ್ಕೆ ಬಂದಿದ್ದ ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪತನವಾಗಿದೆ.
ಇಂದು ಮಾಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಪ್ರಕಟಿಸಿದ ಮುಖ್ಯಮಂತ್ರಿ ಕಮಲ್‌ನಾಥ್ ಕಳೆದ ಹದಿನೈದು ವರ್ಷಗಳ ಬಿ.ಜೆ.ಪಿ. ಆಡಳಿತದ ನಂತರ ಅಸ್ಥಿತ್ವಕ್ಕೆ ಬಂದಿದ್ದ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸ ಮಾಡಿದೆ. ಗೂಂಡಾರಾಜ್, ಮಾಫಿಯಾ ನಿಯಂತ್ರಣ, ಜನಪರ ಆಡಳಿತ ಸಹಿಸದ ಬಿ.ಜೆ.ಪಿ. ಕುತಂತ್ರದಿಂದ ಸರ್ಕಾರ ಬೀಳಿಸಿದೆ. ಇದು ಬಿ.ಜೆ.ಪಿ. ಮತ್ತು ಕೇಂದ್ರದ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿಕ್ರಮ ಎಂದು ಕೆಂಡ ಕಾರಿದ್ದಾರೆ.
ಕಳೆದ ಒಂದು ವರ್ಷಗಳಿಂದ ಅನೇಕ ರಾಜ್ಯಗಳ ಅಧಿಕಾರ ಕಳೆದುಕೊಂಡ ಬಿ.ಜೆ.ಪಿ. ಹಣ, ಅಧಿಕಾರಗಳ ಮದದಿಂದ ಕೆಲವು ರಾಜ್ಯಗಳ ಸರ್ಕಾರಗಳನ್ನು ಬೀಳಿಸಿ ತಮ್ಮ ಪಕ್ಷದ ಆಡಳಿತ ಮುಂದುವರಿಸಿದೆ. ಮಧ್ಯಪ್ರದೇಶದಲ್ಲಿ ಕೂಡಾ ಕಳೆದ ೧೫ ವರ್ಷಗಳಿಂದ ಆಡಳಿತ ಮಾಡಿದ್ದ ಬಿ.ಜೆ.ಪಿ. ಕಳೆದ ವರ್ಷ ಅಧಿಕಾರ ಕಳೆದುಕೊಂಡಿತ್ತು. ಹೀಗೆ ಅಧಿಕಾರ ಕಳೆದುಕೊಂಡ ಬಿ.ಜೆ.ಪಿ. ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಮತ್ತೆ ಅಧಿಕಾರ ಹಿಡಿಯಲು ಪ್ರಯತ್ನಿಸಿತ್ತು. ಇದರ ಅಂಗವಾಗಿ ೨೨ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಿ, ತನ್ನ ಸರ್ಕಾರಕ್ಕಾಗಿ ಪ್ರಯತ್ನಿಸಿತ್ತು. ಮಧ್ಯಪ್ರದೇಶದ ಬಿ.ಜೆ.ಪಿ.ಯ ರಾಜಕೀಯ ವ್ಯಭಿಚಾರಕ್ಕೆ ತುತ್ತಾದ ಕಾಂಗ್ರೆಸ್ ಶಾಸಕರು ಕರ್ನಾಟಕದ ಬಿ.ಜೆ.ಪಿ.ಸರ್ಕಾರದ ರಕ್ಷಣೆ ಪಡೆದು ಪ್ರಹಸನವಾಗಿದ್ದು ಇತ್ತೀಚಿನ ವಿದ್ಯಮಾನ. ಕೋವಿಡ್ ವಿರುದ್ಧ ಜನತಾ ಕರ್ಫ್ಯೂ ನಾಟಕಮಾಡುತ್ತಿರುವ ಮೋದಿ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರನ್ನು ಜನತಾಕರ್ಫ್ಯೂ ದಿನ ಮನೆಗೆ ಕಳುಹಿಸುವರೆ ಎಂದು ಬಿ.ಜೆ.ಪಿ. ಟೀಕಾಕಾರರು ಪ್ರಶ್ನಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *