ಭಟ್ಕಳದ ಇನ್ನೋರ್ವ ಯುವಕನಲ್ಲಿ ಕೊರೋನಾ ಇದು ಅಧಿಕೃತವಲ್ಲ

ದುಬೈನಿಂದ ಭಟ್ಕಳಕ್ಕೆ ಬಂದಿದ್ದ ಇನ್ನೋರ್ವ ಯುವಕನಲ್ಲೂ ಕೊರೋನಾ ಸೋಂಕು ಇದೆ ಎನ್ನಲಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಯುವಕನ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದ‌ ಸಂದರ್ಭದಲ್ಲಿ ಪಾಸಿಟಿವ್ ಬಂದಿದೆ. ಆದರೆ, ಇದು ಅಧಿಕೃತವಲ್ಲ. ಕೆಲವೊಮ್ಮೆ ನೆಗೆಟಿವ್ ವರದಿಗಳೂ ಪಾಸಿಟಿವ್ ಬರುವ ಸಾಧ್ಯತೆ ಇದೆ. ಹೀಗಾಗಿ ಭಾರತದಾದ್ಯಂತ ಪುಣೆ ಪ್ರಯೋಗಾಲಯದ ವರದಿಯೇ ಅಧಿಕೃತ. ಹೀಗಾಗಿ ಇದನ್ನು ಮತ್ತೆ ಪುಣೆಗೆ ಕಳುಹಿಸಿ, ಅಲ್ಲಿಂದ ವರದಿ ಬಂದ ಬಳಿಕ ಕೊರೋನಾ ಸೋಂಕು ತಗುಲಿದೆಯೋ ಅಥವಾ ಇಲ್ಲವೋ ಎನ್ನುವುದನ್ನು ಹೇಳಲಾಗುವುದು’ ಎಂದು ತಿಳಿಸಿರುತ್ತಾರೆ.

ರಾಜ್ಯದಲ್ಲಿ 56 ಕ್ಕೇರಿದ ಸೋಂಕಿತರ ಸಂಖ್ಯೆ, ಭಟ್ಕಳದ ಯುವಕನಲ್ಲಿ ಕೊರೋನಾ ಪತ್ತೆ
ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವಂತೆ ಇಂದು ಉತ್ತರಕನ್ನಡ ಜಿಲ್ಲೆಯ ಭಟ್ಳಳದ ವಿದೇಶದಿಂದ ಮರಳಿದ ಯುವಕನಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಹೊಸ ಪ್ರಕರಣದೊಂದಿಗೆ ರಾಜ್ಯದಲ್ಲಿ ಕರೋನಾ ಸೋಕಿತರ ಸಂಖ್ಯೆ 56 ಕ್ಕೇರಿದಂತಾಗಿದೆ. ಒಂದುದಿವಸದಲ್ಲಿ ಮೂರು ಹೊಸ ಪ್ರಕರಣದಿಂದಾಗಿ ಗುರುವಾರ 53 ರಷ್ಟಿದ್ದ ಕರೋನಾ ಸೋಕಿತರ ಸಂಖ್ಯೆ ಇಂದು 56 ಕ್ಕೇರಿದೆ. ಭಟ್ಳಳದ ಮುಂಡಳ್ಳಿ ಭಾಗದಲ್ಲಿ ಸುರಕ್ಷಣಾ ಕ್ರಮಗಳ ಹಿನ್ನೆಲೆಯಲ್ಲಿ ಕಠಿಣ ನಿಯಮಗಳ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ.

ಭಾರತ ಲಾಕ್‍ಔಟ್ ಹಿನ್ನೆಲೆಯಲ್ಲಿ ನಿನ್ನೆ 1.70 ಲಕ್ಷ ಕೋಟಿ ಯೋಜನೆಗಳನ್ನು ಪ್ರಕಟಿಸಿದ ಕೇಂದ್ರ ಇಂದು ದೇಶದ ಬ್ಯಾಂಕಿಂಗ್ ಕ್ಷೇತ್ರ ಮೂರು ತಿಂಗಳುಗಳ ವರೆಗೆ ಸಾಲವಸೂಲಾತಿ, ತಿಂಗಳ ಕಂತು ತುಂಬುವಿಕೆಗಳಿಗೆ ವಿನಾಯತಿ ನೀಡಲು ಆರ್.ಬಿ.ಐ. ಮೂಲಕ ಆದೇಶಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *