ಕಣ್ಗಾವಲಿಗೆ ದ್ರೋಣ್ ಬಂತು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಮಾಸ್ಕಿಲ್ಲ, ಇತರ ಅನುಕೂಲಗಳೂ ಯಾಕಿಲ್ಲ?

ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ.
ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ ಪೊಲೀಸ್ ಇಲಾಖೆ ವೃಥಾ ಓಡಾಡುವವರನ್ನು ನಿಲ್ಲಿಸಿ ನಾವು ಲಾಕ್‍ಡೌನ್ ಉದ್ಧೇಶ ಉಲ್ಲಂಘಿಸಿದ್ದೇವೆ ಎಂದು ಫಲಕ ಹಿಡಿಸಿ ಪ್ರಾಯಶ್ಚಿತ್ತ ಮಾಡುತಿದ್ದಾರೆ. ಈ ಕ್ರಮದ ಬಗ್ಗೆ ಯಾರಿಗೂ ತಕರಾರಿರಲಿಕ್ಕಿಲ್ಲ. ಆದರೆ ಆರೋಗ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗಳಿಗೆ ಮಾಸ್ಕ್, ಸೆನಿಟೈಸರ್, ಪಾಸ್ ಸೇರಿದಂತೆ ಅವಶ್ಯ ಅನುಕೂಲಗಳನ್ನು ಮಾಡದೆ ಶೋಷಣೆ ಮಾಡುತ್ತಿರುವ ಬಗ್ಗೆ ವಿರೋಧ ವ್ಯಕ್ತವಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸೇವೆ ನೀಡುತಿದ್ದಾರೆ. ಆದರೆ ಇವರಿಗೆ ಅಗತ್ಯ ಸುರಕ್ಷತಾ ಸಲಕರಣೆಗಳೂ ಇಲ್ಲ, ಕೇಂದ್ರ ಪ್ರಕಟಿಸಿರುವ ವಿಮಾ ಅನುಕೂಲಗಳೂ ಇಲ್ಲ ಎನ್ನುವ ಆಕ್ಷೇಪ ವ್ಯಕ್ತವಾಗಿದೆ.
ಈ ಬಗ್ಗೆ ಸಮಾಜಮುಖಿಗೆ ಮಾಹಿತಿ ನೀಡಿರುವ ಕಾರ್ಮಿಕ ಮುಖಂಡೆ ಯಮುನಾ ಗಾಂವಕರ್. ಆರೋಗ್ಯ ಇಲಾಖೆಯ ಆಶಾಗಳು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಮಟ್ಟದಲ್ಲಿ ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆಯ ಕೆಲಸಗಳನ್ನೂ ಮಾಡುತಿದ್ದಾರೆ ಆದರೆ ಅವರಿಗೆ ಸುರಕ್ಷತಾ ಅನುಕೂಲಗಳನ್ನು ಕೊಡದೆ, ವಿಮಾ ಅನುಕೂಲಗಳನ್ನೂ ದೊರಕಿಸದೆ ಸರ್ಕಾರವೇ ಶೋಷಣೆ, ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಉಳ್ಳವರಿಗೊಂದು, ಇಲ್ಲದವರಿಗೊಂದು. ಹಿರಿಯ ಅಧಿಕಾರಿಗಳಿಗೊಂದು ಕೆಳಹಂತದ ಶ್ರಮಿಕ ಉದ್ಯೋಗಿಗಳಿಗೊಂದು ನ್ಯಾಯ ಎನ್ನುವ ತಾರತಮ್ಯ ಮಾಡುತ್ತಿವೆ. ಈ ಬಗ್ಗೆ ಯಾರೂ ಮಾತನಾಡದಿರುವುದುಆಶ್ಚರ್ಯ ಎಂದಿದ್ದಾರೆ. ಸಂಘಟನಾ ಶಕ್ತಿ, ಇತರ ಅನುಕೂಲ, ಅವಕಾಶಗಳಿಲ್ಲದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರಿಗೆ ಸರ್ಕಾರ ಮಾಡುತ್ತಿರುವ ತಾರತಮ್ಯ ಜನಸಾಮಾನ್ಯರ ವಿರೋಧಕ್ಕೂ ಕಾರಣವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *