ಜಿಲ್ಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದವರ ಮೇಲೆ ಪ್ರಕರಣ ದಾಖಲು,ಜಮಾತ್ ಸಭೆಯಲ್ಲಿ ಪಾಲ್ಗೊಂಡವರು ಮಾಹಿತಿ ನೀಡಲು ಆದೇಶ

ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು.

ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ ನಿಷೇಧಾಜ್ಞೆ ಆದೇಶವನ್ನು ಜಾರಿಗೊಳಿಸಿದಾನಿಂದ ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ 16 ಚೆಕ್ ಪೋಸ್ಟ್ ಗಳನ್ನು ಮಾಡುವುದರೊಂದಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುತ್ತದೆ. ಕಳೆದ ಒಂದೇ ವಾರದ ಅವಧಿಯಲ್ಲಿ 10 ಪ್ರಕರಣಗಳನ್ನು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಲಾಗಿರುತ್ತದೆ.

ರಾಮನಗರ, ಮಲ್ಲಾಪುರ, ಕದ್ರಾ ದಲ್ಲಿ ತಲಾ 1, ಭಟ್ಕಳ ಶಹರದಲ್ಲಿ 3, ಹಾಗೂ ಹಳಿಯಾಳದಲ್ಲಿ 2 ಪ್ರಕರಣ ದಾಖಲಾದರೆ, ದಾಂಡೇಲಿ ನಗರ ಠಾಣೆಯಲ್ಲಿ 2 ಪ್ರಕರಣ ದಾಖಲಿಸಿದ್ದು, ಒಂದು ಅಬಕಾರಿ ಕಾಯ್ದೆಯಡಿ ಮತ್ತೊಂದು ಐಪಿಸಿ ಹಾಗೂ ವಿಪತ್ತು ನಿರ್ವಾಹಣಾ ಕಾಯ್ದೆಯಡಿ ದಾಖಲಾಗಿರುತ್ತವೆ ಇದಲ್ಲದೇ ಮಾರ್ಚ 24 ಒಂದೇ ದಿನದಲ್ಲಿ ಜಿಲ್ಲೆಯಾದ್ಯಂತ 20 ಜನರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಅದರಲ್ಲಿ 09 ಜನ ಆರೋಪಿತರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಹಾಗೂ 4 ಬೈಕ್, 1 ಕಾರ್ ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ದೇಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಜನರನ್ನು ಗುರುತಿಸಿ ಈಗಾಗಲೇ ಹೋಮ್ ಕ್ವಾರಂಟೈನ್ ಗೆ ಸೂಚಿಸಲಾಗಿದೆ. ಜಮಾತ್ ಸಭೆಗೆ ಹೊಗುವುದು ತಪ್ಪಲ್ಲ ಆದರೆ ಕರೋನಾ ವೈರಸ್ ಹರಡುವಿಕೆ ಸಾಧ್ಯತೆ ಇರುವದರಿಂದ ಜಿಲ್ಲೆಯ ಜನರು ಈ ತರಹದ ಸಭೆಗೆ ಹಾಜರಾಗಿದ್ದಲ್ಲಿ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡುವ ಮೂಲಕ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಒಂದು ವೇಳೆ ಬಚ್ಚಿಟ್ಟಲ್ಲಿ ತಪ್ಪಾಗುತ್ತದೆ. ಜನರು ಭಯ ಪಡಬೇಕಿಲ್ಲ. ತಮ್ಮ ಕುಟುಂಬ ಹಾಗೂ ಸಮಾಜದ ಹಿತರಕ್ಷಣೆಗಾಗಿ ಸರಕಾರದೊಂದಿಗೆ ಸಹಕರಿಸಬೇಕೆಂದು ವಿನಂತಿಸಿದರು.

ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯಿಂದ ನಿಷೇಧಾಜ್ಞೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು ನಿಷೇಧಾಜ್ಞೆ ಉಲ್ಲಂಘಿಸುವವರ ಮೇಲೆ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಹೋಗದೆ, ಶಾಂತ ರೀತಿಯಿಂದ ಪೊಲೀಸರೊಂದಿಗೆ ಸಹಕರಿಸುವಂತೆ ಮಾಧ್ಯಮಗಳ ಮೂಲಕ ಪೊಲೀಸ್ ವರಿಷ್ಠಾಧಿಕಾರಿ ಕೋರಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *