

ಚಪ್ಪಾಳೆ ತಟ್ಟುವ, ದೀಪ ಆರಿಸುವ ಪ್ರಧಾನ ಮಂತ್ರಿಗಳ ಚೀಪ್ ಗಿಮಿಕ್ ಬಗ್ಗೆ ದೇಶದಾದ್ಯಂತ ಟೀಕೆ, ವಿರೋಧಗಳು ವ್ಯಕ್ತವಾಗುತ್ತಿರುವಂತೆ ಸಂಸದ ರಾಹುಲ್ ಗಾಂಧಿ ಕೂಡಾ ಇಂಥ ಉಪಕ್ರಮಗಳಿಂದ ಕೊರೋನಾ ತಡೆಯಲು ಸಾಧ್ಯವಿಲ್ಲ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಫಿಸಿ ಎಂದು ಪ್ರಧಾನ ಮಂತ್ರಿಗಳನ್ನು ಕಾಲೆಳೆದಿದ್ದಾರೆ.


ಅನ್ಯ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊವಿಡ್-19 ಪರೀಕ್ಷೆಗಳು ನಡೆಯುತ್ತಿಲ್ಲ. ಜನ ಚಪ್ಪಾಳೆ ತಟ್ಟುವುದರಿಂದ ಮತ್ತು ಆಕಾಶಕ್ಕೆ ಟಾರ್ಚ್ ಬೀಡುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಭಾರತ ಹಾಗೂ ಇತರೆ ದೇಶಗಳು ಪ್ರತಿ ಮಿಲಿಯನ್ ಜನರಲ್ಲಿ ಎಷ್ಟು ಜನರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂಬ ತಮ್ಮ ಚಾರ್ಟ್ ಅನ್ನು ಸಹ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಅದರಲ್ಲಿ ಭಾರತ ಪ್ರತಿ ಮಿಲಿಯನ್ ಜನತೆಗೆ 29 ಮಂದಿಯನ್ನು ಮಾತ್ರ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ. ಪಾಕಿಸ್ತಾನ ಪ್ರತಿ ಮಿಲಿಯನ್ ಗೆ 67, ಶ್ರೀಲಂಕಾ 97, ಇಂಗ್ಲೆಂಡ್ 1891, ಅಮೆರಿಕ 2732, ಜರ್ಮನಿ 5812 ಮತ್ತು ಇಟಲಿ 7122 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದೆ.


ಭಾನುವಾರ ರಾತ್ರಿ 9 ಗಂಟೆಗೆ, 9 ನಿಮಿಷಗಳ ಕಾಲ ಎಲ್ಲರಗೂ ಮನೆಯ ಲೈಟ್ ಆಫ್ ಮಾಡಿ, ದೀಪ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಗಿಸುವಂತೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದು, ಈ ಬಗ್ಗೆ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






