ಮಲಗಿದ್ರೆ-ಸಾವು | ಕೂತಿದ್ರೆ – ರೋಗ | ನಡೀತಿದ್ರೆ ಜೀವನ- ಉಪೇಂದ್ರ

ಬೆಂಗಳೂರು: ರಿಯಲ್ ಸ್ಟಾರ್, ಪ್ರಜಾಕೀಯ ನಾಯಕ ಉಪೇಂದ್ರ ತಮ್ಮ ವಿಭಿನ್ನ ಶೈಲಿಯ ಆಲೋಚನೆಗಳಿಂದ ಹೆಸರಾದವರು. ಇದೀಗ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಕುರಿತಂತೆ ಉಪೇಂದ್ರ ತಮ್ಮದೇ ಶೈಲಿಯ ಆಲೋಚನೆ ಮಾಡಿದ್ದು ಈ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲಹೆಗಳನ್ನು ನೀಡಿದ್ದಾರೆ.

ಕೊರೋನಾ ತಡೆಗಾಗಿ ಸರ್ಕಾರ ಲಾಕ್ ಡೌನ್ ಹಾಕಿದ್ದರೂ ಸಹ ಜನ ಹಾಲು, ದಿನಸಿ ಸೇರಿ ಅಗತ್ಯ ವಸ್ತುಗಳ ಖರೀದೆಗೆ ಹೊರಬರುವುದು ನಿಂತಿಲ್ಲ. ಇದರಿಂದ ಜನ ತರಕಾರಿ ಮಾರುಕಟ್ಟೆ, ಅಂಗಡಿಗಳ ಮುಂದೆ ಗುಂಪು ಸೇರುತ್ತಾರೆ. ಈ ಗುಂಪು ಸೇರುವುದನ್ನು ತಡೆಯಲು ಸೂಕ್ತ ಮಾರ್ಗ ಅನುಸರಿಸಬೇಕು ಎಂದ ಉಪೇಂದ್ರ ಎರಡು ಸಲಹೆಗಳನ್ನು ಕೊಟ್ಟಿದ್ದಾರೆ.

ನಿರ್ದೇಶಕ, ಪ್ರಜಾಕೀಯ ನಾಯಕ ಉಪೇಂದ್ರ ಈ ಕುರಿತು ಟ್ವೀಟ್ ಮಾಡಿದ್ದು ಅದನ್ನು ಸಿಎಂ ಅವರಿಗೆ ಟ್ಯಾಗ್ ಮಾಡಿದ್ದಾರೆ. “ಮಾನ್ಯ ಮುಖ್ಯಮಂತ್ರಿಯವರಲ್ಲಿ ವಿನಂತಿ… ಎರಡರಲ್ಲಿ ಯಾವುದಾದರೂ ಒಂದನ್ನು ಮಾಡಿ” ಎಂದು ಎರಡು ಸಲಹೆಗಳನ್ನು ನೀಡಿದ್ದಾರೆ.

ಉಪೇಂದ್ರ ನೀಡಿರುವ ಆ ಎಅರಡು ಸಲಹೆಗಳು ಹೀಗಿದೆ-

1. ಶೇಕಡ ನೂರಕ್ಕೆ ನೂರು ಲಾಕ್‍ಡೌನ್: ಸಂಪೂರ್ಣ ಸರ್ಕಾರಿ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದ ಯೋಜನೆ ಬಳಸಿಕೊಂಡು ಅಗತ್ಯ ವಸ್ತುಗಳನ್ನು ಮನೆಮನೆಗೆ ತಲುಪಿಸಿ
* ಹಾಲು, ತರಕಾರಿ, ಧಾನ್ಯಗಳನ್ನು ಒಂದು ಜಾಗದಲ್ಲಿ ಕೊಳ್ಳಲು ಬಿಟ್ಟರೆ ಜನ ಸೇರುತ್ತಾರೆ.
* ಬೇಕರಿ, ದಿನಸಿ ಮತ್ತು ಅಗತ್ಯ ವಸ್ತುಗಳಿಗಾಗಿ ಸಂತೆ, ಅಂಗಡಿ ತೆರೆದರೆ ಅಲ್ಲೂ ಜನ ಸೇರುತ್ತಾರೆ.

2. ಜನರಿಗೆ ಜವಾಬ್ದಾರಿ ಕೊಟ್ಟು ಸಂಪೂರ್ಣವಾಗಿ ಲಾಕ್‍ಡೌನ್ ತೆರೆಯಿರಿ: ಅಂದರೆ ಅವರವರೇ ಜವಾಬ್ದಾರಿ ತೆಗೆದುಕೊಂಡು ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಅವರವರ ವ್ಯವಹಾರಗಳನ್ನು ಮುಂದುವರಿಸುವುದು. ಜನರನ್ನು ಜನರು ಎಷ್ಟೇ ಮೂರ್ಖರು ಅಂದುಕೊಂಡರು (ಹೀಗೆ ನಾಯಕರಯ ಮಾಡಿಬಿಟ್ಟಿದ್ದಾರೆ) ಅವರವರ ಪ್ರಾಣಕ್ಕೆ ಅವರ ಮಕ್ಕಳ ಪ್ರಾಣಕ್ಕೆ ಬೆಲೆ ಕೊಟ್ಟೇ ಕೊಡುತ್ತಾರೆ ಎಂಬ ನಂಬಿಕೆಯಿಂದ ಹೇಳುತ್ತಿದ್ದೇನೆ.
* ಲಾಕ್‍ಡೌನ್ ಮಾಡಿ ಜನರನ್ನು ಹಾಲು, ರೇಷನ್ ಖರೀದಿಸುವುದಕ್ಕೆ ಬಿಟ್ಟು ಜನ ಗುಂಪು ಸೇರಿದಾಗ ಜನರನ್ನು ಬೈಯ್ಯುವುದು ಎಷ್ಟು ಸರಿ?

ಇಷ್ಟು ಮಾತ್ರವಲ್ಲದೆ “ಇಷ್ಟೆಲ್ಲಾ ಲಾಕ್‍ಡೌನ್ ಮಾಡಿಯೇ ನಮ್ಮ ದಡ್ಡ ಜನರು ಹೀಗೆ. ಇನ್ನು ಲಾಕ್‍ಡೌನ್ ತೆಗೆದ್ರೆ ರೋಡ್ ರೋಡಲ್ಲಿ ಹೆಣ ಬೀಳುತ್ತೆ ಅಂತ ಹೇಳುವವರಿಗೆ (ಹೆದರುವವರಿಗೆ) ಒಂದು ಕಿವಿ ಮಾತು. ಹೀಗೆ ಲಾಕ್‍ಡೌನ್ ಮುಂದುವರಿಸಿದ್ರೂ ಅದೇ ಪರಿಸ್ಥಿತಿ ಬರಬಹುದು ಯೋಚನೆ ಮಾಡಿ. ಮಲಗಿದ್ರೆ-ಸಾವು | ಕೂತಿದ್ರೆ – ರೋಗ | ನಡೀತಿದ್ರೆ ಜೀವನ” ಎಂದು ಹೇಳಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *