

ಶಿವಮೊಗ್ಗ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ, ಮಣಿಪಾಲ ಕಸ್ತೂರ್ಬಾ ಆಸ್ಪತೆಯು ಕೆಲವೊಂದು ಹೊರರೋಗಿ ವಿಭಾಗಗಳು ಮಾತ್ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ನಡುವೆ ಕಾರ್ಯನಿರ್ವಹಿಸುತ್ತಿವೆ . ಆದಾಗ್ಯೂ, ಲಾಕ್ ಡೌನ್ ಮತ್ತು ಅಂತರ ಜಿಲ್ಲಾ ಚಲನೆಗೆ ನಿಬರ್ಂಧ ಇರುವುದರಿಂದ, ಉಡುಪಿ ಜಿಲ್ಲೆಯನ್ನು ಹೊರತುಪಡಿಸಿ ಇತರ ಜಿಲ್ಲೆಗಳ ಜನರು, ಅನಿವಾರ್ಯವಾಗಿ ತುರ್ತು ಚಿಕಿತ್ಸೆ ಮತ್ತು ತುರ್ತು ಓ ಪಿ ಡಿ ಸೇವೆಗಳ ಅವಶ್ಯವಿದ್ದರೆ ಮಾತ್ರ ಆಸ್ಪತ್ರೆಗೆ ಭೇಟಿ ನೀಡುವಂತೆ ಕೋರಲಾಗಿದೆ.


ಉಳಿದವರೆಲ್ಲರೂ 4, ಮೇ 2020ರ ನಂತರ ಭೇಟಿ ನೀಡುವಂತೆ ವಿನಂತಿಸುತಿದ್ದೇವೆ, ತೀವ್ರವಲ್ಲದ ಚಿಕಿತ್ಸೆ, ಈಗಾಗಲೇ ಚಿಕಿತ್ಸೆಯಲ್ಲಿರುವ, ನಿರಂತರ ತಪಾಸಣೆಗೆ ಬರುವ ರೋಗಿಗಳು ಮತ್ತು ಫಾಲೋ ಅಪ್ ರೋಗಿಗಳು ತಮ್ಮ ಮನೆಯಲ್ಲಿ ಕುಳಿತು ಟೆಲಿಮೆಡಿಸಿನ್ ಮೂಲಕ ವೈದ್ಯರನ್ನು ಸಂಪರ್ಕಿಸಬೇಕು. ವೈದ್ಯರು ದೂರವಾಣಿ ಮೂಲಕ ಸಮಾಲೋಚನೆ ಮತ್ತು ವೈದ್ಯಕೀಯ ಸಲಹೆಯನ್ನು ನೀಡಲಿದ್ದಾರೆ. ಬೆಳಿಗ್ಗೆ 9.00 ರಿಂದ ಸಂಜೆ 4.00 ರವರೆಗೆ ದೂರವಾಣಿ ಕರೆ ಮಾಡುವುದರ ಮೂಲಕ ಎಲ್ಲಾ ವಿಭಾಗದ ವೈದ್ಯರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ 080 47192235ಗೆ ಕರೆ ಮಾಡಬೇಕಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ವೈದ್ಯಕೀಯ ಅಧೀಕ್ಷಕರಾದ ಡಾ ಅವಿನಾಶ್ ಶೆಟ್ಟಿ ವಿನಂತಿಸಿದ್ದಾರೆ.
