ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಅಗಲಿಕೆ

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *