ಕೋವಿಡ್-19: 1000ಕ್ಕೇರಿದ ಸಾವಿನ ಸಂಖ್ಯೆ

ಲಾಕ್’ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇವಲ 24 ಗಂಟೆಗಳಲ್ಲಿ ಮಹಾಮಾರಿಗೆ 73 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,007ಕ್ಕೆ ಏರಿಕೆಯಾಗಿದೆ. 

File photo

ನವದೆಹಲಿ; ಲಾಕ್’ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇವಲ 24 ಗಂಟೆಗಳಲ್ಲಿ ಮಹಾಮಾರಿಗೆ 73 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,007ಕ್ಕೆ ಏರಿಕೆಯಾಗಿದೆ. 

ಇನ್ನು ದೇಶದಲ್ಲಿ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗುತ್ತಲೇ ಇದ್ದು, ಈವರೆಗೂ 31,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಡುವಲ್ಲೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, 31,000 ಮಂದಿಯ ಪೈಕಿ 7,696 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಅದರಂತೆ ದೇಶದಲ್ಲಿ ಗುಣಮುಖರಾಗುತ್ತಿರುವ ಶೇಕಡಾವಾರು ಸಂಖ್ಯೆ 24.56ಕ್ಕೆ ಏರಿಕೆಯಾಗಿದೆ. 

ಈ ನಡುವೆ ಹೇಳಿಕೆ ನೀಡಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು, ದ್ವಿಗುಣಗೊಳ್ಳುತ್ತಿರುವ ಸೋಂಕಿತರ ಸಂಖ್ಯೆ ಶೇ.10.9ರಷ್ಟು ಇಳಿಕೆಯಾಗಿದೆ ಎಂದು ಹೇಳಿದ್ದಾರೆ. 

ನಿನ್ನೆಯಷ್ಟೇ ಪ್ಲಾಸ್ಮಾ ಥೆರಪಿ ಬಗ್ಗೆ ಹೇಳಿಕೆ ನೀಡಿದ್ದ ಕೇಂದ್ರ ಸರ್ಕಾರ, ಕೊರೋನಾಗೆ ಈ ವರೆಗೂ ಯಾವುದೇ ಅಂಗೀಕೃತ ಚಿಕಿತ್ಸೆಗಳಿಲ್ಲ. ಮಾರಕ ವೈರಾಣು ವ್ಯಾಧಿಗೆ ಪ್ಲಾಸ್ಮಾ ಚಿಕಿತ್ಸೆ ಬಳಸಿಕೊಳ್ಳಬಹುದು ಎಂದು ಹೇಳುವುದಕ್ಕೆ ಸಾಕಷ್ಟು ಸಾಕ್ಷ್ಯಗಳೂ ಇಲ್ಲ. ಅದಕ್ಕೆಂದೇ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಪ್ಲಾಸ್ಮಾ ಥೆರಪಿಯ ಕ್ಷಮತೆ ಬಗ್ಗೆ ರಾಷ್ಟ್ರೀಯ ಮಟ್ಟದ ಅಧ್ಯಯನ ಆರಂಭಿಸಿದೆ. ಐಸಿಎಂಆರ್ ಅಧ್ಯಯನ ಪೂರ್ಣಗೊಳ್ಳುವವರೆಗೆ ಹಾಗೂ ಬಲವಾದ ವೈಜ್ಞಾನಿಕ ಪುರಾವೆ ಸಿಗುವವರೆಗೆ, ಪ್ಲಾಸ್ಮಾ ಚಿಕಿತ್ಸೆಯನ್ನು ಕೇವಲ ಪ್ರಾಯೋಗಿಕವಾಗಿ ಹಾಗೂ ಸಂಶೋಧನೆಯ ಉದ್ದೇಶದಿಂದ ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿತ್ತು. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *