ಆರೋಗ್ಯ ಸೇತು ಆ್ಯಪ್ ಬಗ್ಗೆ ರಾಹುಲ್ ಗಾಂಧಿ ಆತಂಕ, ಆರೋಪ ತಳ್ಳಿಹಾಕಿದ ಬಿಜೆಪಿ

ಕೇಂದ್ರ ಸರ್ಕಾರದ ಆರೋಗ್ಯ ಸೇತು ಮೊಬೈಲ್ ಆ್ಯಪ್ ಗೆ ಸಂಬಂಧಿಸಿದಂತೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಇದೊಂದು ‘ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ’ ಎಂದು ಆರೋಪಿಸಿದ್ದಾರೆ.

Rahul Gandhi

Source : PTI

ನವದೆಹಲಿ: ಕೇಂದ್ರ ಸರ್ಕಾರದ ಆರೋಗ್ಯ ಸೇತು ಮೊಬೈಲ್ ಆ್ಯಪ್ ಗೆ ಸಂಬಂಧಿಸಿದಂತೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ , ಇದೊಂದು ‘ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ’ ಎಂದು ಆರೋಪಿಸಿದ್ದಾರೆ.

ಆರೋಗ್ಯ ಸೇತು ಆ್ಯಪ್ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಡಾಟಾ ಭದ್ರತೆ ಮತ್ತು ಖಾಸಗಿತನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟು ಹಾಕಿದೆ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಯಾವುದೇ ಮೇಲ್ವಿಚಾರಣೆಯಿಲ್ಲದೆ ಖಾಸಗಿ ಆಪರೇಟರ್‌ಗೆ ಹೊರಗುತ್ತಿಗೆಯನ್ನು ನೀಡಿದೆ. ಹಾಗಾಗಿ ಡೇಟಾ ಸೆಕ್ಯೂರಿಟಿ ಹಾಗೂ ಗೌಪ್ಯತೆ ಸೋರಿಕೆ ಬಗ್ಗೆ ಆತಂಕವನ್ನು ಹೆಚ್ಚಿಸುತ್ತಿದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ. ಆದರೆ ನಾಗರಿಕರ ಒಪ್ಪಿಗೆಯಿಲ್ಲದೆ ಅವರನ್ನು ಪತ್ತೆ ಹಚ್ಚಲು ಭಯವನ್ನು ಬಳಸಿಕೊಳ್ಳಬಾರದು’ ಎಂದು ಹೇಳಿದ್ದಾರೆ.

ಇನ್ನು ರಾಹುಲ್ ಗಾಂಧಿ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದ್ದು, ಕಾಂಗ್ರೆಸ್ ನಾಯಕ ಈಗ ಮತ್ತೊಂದು ಹೊಸ ಸುಳ್ಳು ಹೇಳುತ್ತಿದ್ದಾರೆ. ತಮ್ಮ ಜೀವನದುದ್ದಕ್ಕೂ ಕಣ್ಗಾವಲಿನಲ್ಲಿ ತೊಡಗಿರುವವರಿಗೆ ತಂತ್ರಜ್ಞಾನವನ್ನು ಹೇಗೆ ಉತ್ತಮಗೊಳಿಸಬಹುದು ಎಂದು ತಿಳಿದಿರುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ತಿರುಗೇಟು ನೀಡಿದ್ದಾರೆ.

ಕೊರೋನಾ ವೈರಸ್ ವಿರುದ್ದ ಹೋರಾಟದಲ್ಲಿ ಕೇಂದ್ರ ಸರಕಾರವು ತಂತ್ರಜ್ಞಾನದ ನೆರವನ್ನು ಪಡೆದಿತ್ತು. ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಆರೋಗ್ಯ ಸೇತು ಆ್ಯಪ್ ಅನ್ನು ಎಲ್ಲ ಸರಕಾರಿ ನೌಕರರು ಮತ್ತು ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಕಡ್ಡಾಯವಾಗಿ ಬಳಕೆ ಮಾಡುವಂತೆ ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಉಲ್ಲೇಖ ಮಾಡಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *