ಪ್ರಧಾನಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ 3 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ 3 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಲಾಕ್ ಡೌನ್ ಜಾರಿಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ 5ನೇ ಬಾರಿಗೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಮೂಲಕ ಸಭೆ ನಡೆಸಲಿದ್ದು,ಹಂತ ಹಂತವಾಗಿ ಆರ್ಥಿಕ ಚಟುವಟಿಕೆ ಪುನರ್ ಆರಂಭ, ಕೊರೋನಾ ನಿರ್ವಹಣೆ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ.
ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸೇರಿದಂತೆ ಗೃಹ ಮತ್ತು ಆರೋಗ್ಯ ಕಾರ್ಯದರ್ಶಿ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳಿನ ಸಭೆಯಲ್ಲಿ ರಾಷ್ಟ್ರದಾದ್ಯಂತ ಲಾಕ್ ಡೌನ್ ಹಿಂತೆಗೆದುಕೊಳ್ಳುವಿಕೆಯ ಮುಂದಿನ ಹಂತಗಳು, ಆರ್ಥಿಕ ಚಟುವಟಿಕೆ ಹೆಚ್ಚಳ, ಕಂಟೈನ್ ಮೆಂಟ್ ವಲಯಗಳಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಇರುವ ಹಾದಿ ಮತ್ತಿತರ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ವಲಸೆ ಕಾರ್ಮಿಕರ ಬಗ್ಗೆಯೂ ಗಮನ ಹರಿಸುವ ಸಾಧ್ಯತೆಯಿದೆ. ಇದರಿಂದಾಗಿ ಪ್ರಸ್ತುತ ಉತ್ಪಾದನೆ, ಕೈಗಾರಿಕಾ ಮತ್ತು ನಿರ್ಮಾಣ ಚಟುವಟಿಕೆಗಳ ಪೂರ್ಣ ಪ್ರಮಾಣದ ಪುನರಾರಂಭಕ್ಕೆ ತೊಂದರೆಯಾಗುತ್ತಿದೆ.