ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ಸಾಲ, 18 ಸಾವಿರ ಕೋಟಿ ಆದಾಯ ತೆರಿಗೆ ವಾಪಸ್: ನಿರ್ಮಲಾ ಸೀತಾರಾಮನ್

25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ಹಾಗೂ 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

Finance Minister Nirmala Sitharaman

ನವದೆಹಲಿ: 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ಹಾಗೂ 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್ ಕಾರಣದಿಂದ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು, ಈ ನಿಟ್ಟಿನಲ್ಲಿ ಸಮಾಜದ ವಿವಿಧ ವರ್ಗಗಳಿಗೆ ನಿನ್ನೆ ಪ್ರಧಾನಿ ಮೋದಿ ಅವರು 20 ಲಕ್ಷ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಇಂದು ಸುದ್ದಿಗೋಷ್ಠಿಯಲ್ಲಿ ಅದರ ವಿವರಗಳನ್ನು ನೀಡಿದ ನಿರ್ಮಲಾ ಸೀತಾರಾಮನ್ ಅವರು, ಈ ‘ಆರ್ಥಿಕ ಪ್ಯಾಕೇಜ್ ಸ್ವಾವಲಂಬಿ ಭಾರತವನ್ನು ನಿರ್ಮಿಸಲಿದೆ’ ಎಂದು ಹೇಳಿದರು.

ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡುತ್ತಿದ್ದು, ಇದರಿಂದ 45 ಲಕ್ಷ ಸಣ್ಣ ಕಂಪನಿಗಳಿಗೆ ಅನುಕೂಲವಾಗಲಿದೆ ಎಂದರು.

ಅಕ್ಟೋಬರ್ 31ರ ವರೆಗೆ ಸಣ್ಣ ಕೈಗಾರಿಕೆಗಳು ಸಾಲ ಪಡೆಯಲು ಅವಕಾಶ ನೀಡಲಾಗಿದೆ. ಈ ಕಂಪನಿಗಳು ಪಡೆಯುವ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. ಸಾಲ ಮರುಪಾವತಿಗೆ ನಾಲ್ಕು ವರ್ಷ ಕಾಲಾವಕಾಶ ನೀಡಲಾಗಿದ್ದು, ಒಂದು ವರ್ಷದವರಗೆ ಇಎಂಐ ವಿನಾಯಿತಿ ನೀಡಲಾಗುವುದು ಎಂದು ಸೀತಾರಾಮನ್ ತಿಳಿಸಿದರು.

ಇದೇ ವೇಳೆ ತೆರಿಗೆದಾರರಿಗೆ ಬಂಪರ್ ಗಿಫ್ಟ್ ನೀಡಿದ ಸಚಿವೆ, 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡುವುದಾಗಿ ತಿಳಿಸಿದರು.

15 ಸಾವಿರ ರೂಪಾಯಿ ಒಳಗಿನ ವೇತನದಾರರಿಗೆ ತಕ್ಷಣ ಇಪಿಎಫ್ ವಾಪಸ್ ನೀಡಲಾಗುವುದು. ಆಗಸ್ಟ್ ವರೆಗೆ ಇಪಿಎಫ್ ಹಣವನ್ನು ಸರ್ಕಾರವೇ ಪಾವತಿಸಲಿದೆ ಎಂದು ಸೀತಾರಾಮನ್ ಹೇಳಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *