
ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಅವರು ಗುರುವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಅವರು ಗುರುವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮೇ.15 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆಂದು ಹೇಳಲಾಗುತ್ತಿದೆ.
ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಮುತ್ತಪ್ಪ ರೈ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇದರಂತೆ ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಕಾರ್ಯಪ್ರವೃತ್ತರಾಗಿದ್ದರು.
ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ಮುತ್ತಪ್ಪ ರೈ ಅವರು ಬೆಂಗಳೂರಿನ ಬಿಡದಿಯಲ್ಲಿ ಜೀವನ ನಡೆಸುತ್ತಿದ್ದರು.
