
ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಜೂನ್ 25ರಿಂದ ಜುಲೈ 4ರವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದರು.
ಪರೀಕ್ಷೆಗೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2879 ಪರೀಕ್ಷಾ ಕೇಂದ್ರಗಳಲ್ಲಿ 43720 ಕೊಠಡಿ ಬಳಸುತ್ತಿದ್ದೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಮತ್ತು ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಂಬೆಸಿ ಗ್ರೂಪ್ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಒದಗಿಸಲಿದೆ. ಥರ್ಮಲ್ ಸ್ಕಾನರ್ ಮೂಲಕ ವಿದ್ಯಾರ್ಥಿಗಳ ತಪಾಸಣೆ ಮಾಡಲಾಗುತ್ತದೆ. ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಬಹುತೇಕ ಜಿಲ್ಲೆಗಳಲ್ಲಿ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳು, ವಸತಿ ಶಾಲೆಗಳು ಹಾಗೂ ಕೆಲವೊಂದು ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳ ಹಾಸ್ಟೆಲ್‍ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಉಪಯೋಗಿಸಿಕೊಳ್ಳುತ್ತಿರುವುದರಿಂದ ಈ ಹಾಸ್ಟೆಲ್ ವಾಸಿಗಳಾಗಿದ್ದ ಮಕ್ಕಳು ತಂತಮ್ಮ ಗ್ರಾಮಗಳಿಗೆ ಹೋಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಆವರು ನೊಂದಾಯಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಾಧ್ಯವಿಲ್ಲವಾದ್ದರಿಂದ ಅಂತಹ ವಿದ್ಯಾರ್ಥಿಗಳು ಹಾಗೂ ಪೋಷಕರು ತಾವು ಪ್ರಸ್ತುತ ತಂಗಿರುವ ಸ್ಥಳಕ್ಕೆ ಹತ್ತಿರವಿರುವ ಪರೀಕ್ಷಾ ಕೇಂದ್ರದ ಮೂಲಕ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಈ ಕುರಿತಂತೆ ಬೇರೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿಚ್ಛಿಸುವ ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯ ಶಿಕ್ಷಕರನ್ನು ಈ ತಿಂಗಳ 25 ರೊಳಗೆ ಸಂಪರ್ಕಿಸಿ ವಿವರಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.
ಇದೇ ರೀತಿ ಯಾವುದಾದರೂ ವಲಸೆ ಕಾರ್ಮಿಕರ ಕುಟುಂಬಗಳ ಮಕ್ಕಳು ತಮ್ಮ ಸ್ವಂತ ಊರುಗಳಿಗೆ ತೆರಳಿದ್ದಲ್ಲಿ ಅಂತಹ ಮಕ್ಕಳಿಗೂ ಸಹ ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶ ನೀಡಲಾಗಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು.
ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬೇರೆ ರಾಜ್ಯಗಳಿಂದ ಬಂದು ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಚಂದನ ದೂರದರ್ಶನ ವಾಹಿನಿಯಲ್ಲಿ ಈಗಾಗಲೇ ಪ್ರಸಾರವಾಗುತ್ತಿರುವ ಪುನರ್ ಮನನ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈ ಕಾರ್ಯಕ್ರಮದ ಅಂತ್ಯದಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ವಿಶೇಷ ತರಗತಿಗಳನ್ನು 3 ದಿನದ ಅವಧಿಗೆ ರೂಪಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವ ಮನಸ್ಥಿತಿಗೆ ಸಜ್ಜುಗೊಳಿಸಲಾಗುವುದು ಎಂದೂ ಸಚಿವರು ತಿಳಿಸಿದರು. ಕಾರ್ಯಕ್ರಮ ಈ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಎಂದು ಅವರು ಹೇಳಿದರು.
ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಿದ್ದೇವೆ. ಸಾಧ್ಯವಾದರೆ ಕಡಿಮೆ ಮಾಡಿ ಎಂದು ಸರ್ಕಾರ ಸೂಚಿಸಿದೆ. ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರ ನಿನ್ನೆಯಷ್ಟೇ ದೇಶಾದ್ಯಂತ ಮೇ 31ರವರೆಗೆ ಲಾಕ್ಡೌನ್ ವಿಸ್ತರಿಸಿದ್ದು, ಯಾವುದೇ ಶಾಲಾ, ಕಾಲೇಜುಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
