
ದಾವಣಗೆರೆಯಲ್ಲಿ 19, ಶಿವಮೊಗ್ಗ 12, ಕಲಬುರಗಿ 13, ಬೆಂಗಳೂರು 12, ಬಾಗಲಕೋಟೆ 5, ಉಡುಪಿ 4, ಉತ್ತರ ಕನ್ನಡ 4, ಹಾಸನ 3, ಚಿಕ್ಕಮಗಳೂರು 5, ಗದಗ, ಯಾದಗಿರಿ, ಬೀದರ್, ವಿಜಯಪುರ ಮತ್ತು ಚಿತ್ರದುರ್ಗದಲ್ಲಿ ತಲಾ 1 ಪ್ರಕರಣ
ಸಕ್ಕರೆ ನಾಡು ಮಂಡ್ಯಕ್ಕೆ ಮಹಾರಾಷ್ಟ್ರ ಕಂಟಕ ಎದುರಾಗಿದ್ದು, ಜಿಲ್ಲೆಯಲ್ಲಿ ಮಂಗಳವಾರ ಒಂದೇ ಬರೋಬ್ಬರಿ 71 ಹಾಗೂ ರಾಜ್ಯದಲ್ಲಿ ಒಟ್ಟು 149 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಸಕ್ಕರೆ ನಾಡು ಮಂಡ್ಯಕ್ಕೆ ಮಹಾರಾಷ್ಟ್ರ ಕಂಟಕ ಎದುರಾಗಿದ್ದು, ಜಿಲ್ಲೆಯಲ್ಲಿ ಮಂಗಳವಾರ ಒಂದೇ ಬರೋಬ್ಬರಿ 71 ಹಾಗೂ ರಾಜ್ಯದಲ್ಲಿ ಒಟ್ಟು 149 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ.
ಮಂಡ್ಯದಲ್ಲಿ ಇಂದು ಒಂದೇ ದಿನ 71 ಮಂದಿಗೆ ಸೋಂಕು ತಗುಲಿದೆ. ಇನ್ನು ದಾವಣಗೆರೆಯಲ್ಲಿ 19, ಶಿವಮೊಗ್ಗ 12, ಕಲಬುರಗಿ 13, ಬೆಂಗಳೂರು 12, ಬಾಗಲಕೋಟೆ 5, ಉಡುಪಿ 4, ಉತ್ತರ ಕನ್ನಡ 4, ಹಾಸನ 3, ಚಿಕ್ಕಮಗಳೂರು 5, ಗದಗ, ಯಾದಗಿರಿ, ಬೀದರ್, ವಿಜಯಪುರ ಮತ್ತು ಚಿತ್ರದುರ್ಗದಲ್ಲಿ ತಲಾ 1 ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಒಟ್ಟು 149 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಈ ನಡುವೆ, ರಾಜ್ಯದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಬಳ್ಳಾರಿಯ 61 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಇವರು ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚಿಗೆ ಹೃದಯ ಶಸ್ತ್ರ ಚಿಕಿತ್ಸೆಗೂ ಒಳಪಟ್ಟಿದ್ದರು. ವಿಜಯಪುರದ 65 ವರ್ಷ ವೃದ್ಧರೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇವರನ್ನು ಸೋಮವಾರ ಆಸ್ಪತ್ರೆಗೆ ಕರೆತರುವಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ 54 ವರ್ಷದ ನಿವಾಸಿ ಸೋಮವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40ಕ್ಕೇರಿಕೆಯಾಗಿದೆ.
1395 ಪ್ರಕರಣಗಳ ಪೈಕಿ 530 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 802 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿಗೆ ರಾಜ್ಯದಲ್ಲಿ ಒಟ್ಟಾರೆ 40 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಪತ್ತೆಯಾಗಿರುವ 127 ಪ್ರಕರಣಗಳ ಪೈಕಿ 91 ಪ್ರಕರಣಗಳಿಗೆ ಮಹಾರಾಷ್ಟ್ರದ ಮುಂಬೈ ನಂಟಿದೆ.
