
ದೇಶದಾದ್ಯಂತ ಜಾರಿಯಲ್ಲಿದ್ದ ಲಾಕ್’ಡೌನ್ ಸಡಿಲಗೊಂಡ ಬೆನ್ನಲ್ಲೇ ದೇಶದಲ್ಲಿ ಕೊರೋನಾ ಸ್ಫೋಟ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಬರೋಬ್ಬರಿ ದಾಖಲೆಯ 5,611 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ದೇಶದಾದ್ಯಂತ ಜಾರಿಯಲ್ಲಿದ್ದ ಲಾಕ್’ಡೌನ್ ಸಡಿಲಗೊಂಡ ಬೆನ್ನಲ್ಲೇ ದೇಶದಲ್ಲಿ ಕೊರೋನಾ ಸ್ಫೋಟ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಬರೋಬ್ಬರಿ ದಾಖಲೆಯ 5,611 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಮಹಾಮಾರಿ ವೈರಸ್’ಗೆ ನಿನ್ನೆ ಒಂದೇ ದಿನ 140 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಕೂಡ 3,303ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ದೇಶದಾದ್ಯಂತ 42,298 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇನ್ನು ಕೊರೋನಾದ ಕೇಂದ್ರಬಿಂದುವಾಗಿರುವ ಮಹಾರಾಷ್ಟ್ರದಲ್ಲಿ ಮತ್ತೆ 2,100 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 37,158ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ದೇಶದ ಇದರೆ ರಾಜ್ಯಗಳಲ್ಲೂ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಏರಡನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 12,448ಕ್ಕೇರಿದೆ.
