
ರಾಜ್ಯದಲ್ಲಿ ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದವರೆಗೆ 196 ಜನರಲ್ಲಿ ಕೊರೋನಾ ಸೊಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿದ್ದು 2 ಸಾವಿರದ ಗಡಿ ತಲುಪಿದೆ. ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದವರೆಗೆ 196 ಜನರಲ್ಲಿ ಸೊಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಿವಾಸಿಯಾಗಿದ್ದ 32 ವರ್ಷದ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಮೇ 19ರಂದು ಉಸಿರಾಟದ ತೊಂದರೆಯಿಂದ ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ದೀರ್ಘಕಾಲೀನ ಕ್ಷಯದಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇವರು ಇಲ್ಲಿಯವರೆಗೆ ರಾಜ್ಯದಲ್ಲಿ ಕೊರೋನದಿಂದ ಮೃತಪಟ್ಟ ಅತಿ ಕಿರಿಯ ರೋಗಿಯಾಗಿದ್ದಾರೆ. ಇದರಿಂದ ಸೋಂಕಿನಿಂದ ಮೃತಪಟ್ಟವರ ಖ್ಯೆ 43 ಕ್ಕೆ ಏರಿಕೆಯಾಗಿದೆ.
ಯಾದಗಿರಿ ಜಿಲ್ಲೆಯೊಂದರಲ್ಲೇ ಬರೋಬ್ಬರಿ 72 ಪ್ರಕರಣಗಳು ಪತ್ತೆಯಾಗಿವೆ.ಗದಗದಲ್ಲಿ 15 ಮಂದಿಗೆ ಸೋಂಕು ತಗುಲಿದೆ, ರಾಯಚೂರಿನಲ್ಲಿ 36 ಪ್ರಕರಣಗಳು ವರದಿಯಾಗಿವೆ.
ಚಿಕ್ಕಬಳ್ಳಾಪುರದಲ್ಲಿ 20, ಮಂಡ್ಯದಲ್ಲಿ 28, ಬೆಂಗಳೂರಿನಲ್ಲಿ 4, ಯಾದಗಿರಿಯಲ್ಲಿ 72, ಗದಗದಲ್ಲಿ 12, ಉತ್ತರ ಕನ್ನಡದಲ್ಲಿ 2, ಹಾಸನದಲ್ಲಿ 3 ಪ್ರಕರಣಗಳು ದೃಢಪಟ್ಟಿವೆ.
ಈ ಪೈಕಿ 184 ಸೋಂಕಿತರಿಗೆ ಮುಂಬೈ ನಂಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. (ಕ.ಪ.)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
