ಸರ್ಕಾರದ ಕ್ರಮಕ್ಕೆ ವಿರೋಧ- ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಡಿತ ಸಲ್ಲದು

(ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಡಿತ ಸಲ್ಲದು-
ಚಿಂತನ ಉತ್ತರ ಕನ್ನಡ, ಸಹಯಾನ)

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಪ್ರತಿವರ್ಷ ಹೊರನಾಡಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ, ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ರಾಜ್ಯದ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಧನ ಸಹಾಯ ಮಾಡುವ ಕನ್ನಡದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರಿಗೆ ಗೌರವ ನೀಡುವ … ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿತ್ತು. ಆದರೆ ಪ್ರಾಧಿಕಾರವು ಅನುದಾನದ ಕೊರತೆಯಿಂದ ಇಂತಹ ಎಲ್ಲಾ ಪ್ರೋತ್ಸಾಹಕ ಕಾರ್ಯಕ್ರಮಗಳನ್ನೂ ಕೈಬಿಡುವ ತೀರ್ಮಾನ ತೆಗೆದುಕೊಂಡಿರುವುದು ದುರಾದೃಷ್ಟಕರ.
ಅದರಲ್ಲೂ ಕನ್ನಡ ಸಾಹಿತ್ಯ- ಸಂಸ್ಕೃತಿ- ಭಾಷೆಯ ಅಭಿವೃದ್ಧಿಗೆ ಅಗತ್ಯವಿರುವ ಧನ ಸಹಾಯವನ್ನು ಸರ್ಕಾರ ಕಡಿತ ಮಾಡಿದ್ದನ್ನೂ ಕೂಡ ಮರುಪರಿಶೀಲಿಸುವಂತೆ ಚಿಂತನ ಉತ್ತರ ಕನ್ನಡ ಮತ್ತು ಸಹಯಾನ, ಕೆರೆಕೋಣ ಒತ್ತಾಯಿಸುತ್ತವೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದೇ ಕನ್ನಡ ಭಾಷೆ ಸಾಹಿತ್ಯ ಕಲೆ ಸಂಸ್ಕೃತಿಯನ್ನೂ ಒಳಗೊಂಡಂತೆ ನಾಡು ನುಡಿಯ ಹಿತಾಸಕ್ತಿಯ ರಕ್ಷಣೆಗಾಗಿ. ಹಾಗೆಯೇ ಅಧಿಕಾರಕ್ಕೆ ಬರುವ ಎಲ್ಲಾ ಸರ್ಕಾರಗಳೂ ಕನ್ನಡ ಅಭಿವೃದ್ಧಿಯ ಕೆಲಸಕ್ಕೆ ಬದ್ಧವಾಗಿರುವುದಾಗಿಯೂ, ಕನ್ನಡದ ಕೆಲಸಕ್ಕೆ ಹಣಕಾಸಿನ ಕೊರತೆ ಎಂದೂ ಆಗದೆಂದು ಭರವಸೆ ನೀಡಿದ್ದನ್ನು ಮರೆತಿರುವುದು ಖಂಡನಾರ್ಹ.
ಈಗಾಗಲೇ ದೇಶದ ಹಲವು ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಪೀಠಗಳಿವೆ, ಅಧ್ಯಯನ ಕೇಂದ್ರಗಳಿವೆ, ಅಲ್ಲಿ ಕನ್ನಡ ಕಲಿಕೆ ಮತ್ತು ಸಂಶೋಧನೆಯ ಕೆಲಸ ನಡೆಯುತ್ತಿದೆ. ಇದು ಕನ್ನಡ ನುಡಿಯ ವಿಸ್ತರಣೆಯ ದೃಷ್ಟಿಯಿಂದ ತೀರಾ ಮಹತ್ವದ ಕೆಲಸ. ಹೊರ ರಾಜ್ಯದಲ್ಲಿ ಓದುವ ವಿದ್ಯಾರ್ಥಿಗಳಿಗೆ ಧನಸಹಾಯವಾಗಿ ವಿದ್ಯಾರ್ಥಿವೇತನ ನೀಡುವುದು ಕೂಡ ಕನ್ನಡದ ಅಭಿವೃದ್ಧಿಯ ಒಂದು ಭಾಗವೇ ಆಗಿದೆ. ಹೀಗೆ ಅಲ್ಪ ಮೊತ್ತದ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವುದರಿಂದ ಅವರ ಕಲಿಕೆ ಮೊಟಕಾಗುತ್ತದೆ. ಅಲ್ಲಿಯ ಕನ್ನಡ ವಿಭಾಗಗಳೇ ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಇದರ ಬದಲು ವಿದ್ಯಾರ್ಥಿ ವೇತನದ ಮೊತ್ತವನ್ನೂ ಈಗಿರುವ ಪ್ರಮಾಣಕ್ಕಿಂತ ಹೆಚ್ಚಿಸಲು ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸುತ್ತೇವೆ.
ಹಾಗೆಯೇ ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತಾಲೂಕಾವಾರು ನೀಡುತ್ತಿರುವ ಪ್ರೋತ್ಸಾಹ ಮತ್ತು ಧನ ಸಹಾಯವೂ ಕೂಡ ಹಲವು ಬಡ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಿದೆ. ಕನ್ನಡ ಕಲಿಕೆಯ ಕುರಿತು ಅವರಲ್ಲಿ ಆಸಕ್ತಿ ಬೆಳೆಸಿದೆ. ಈ ಪ್ರೋತ್ಸಾಹ ಧನವನ್ನು ಇನ್ನಷ್ಟು ವಿಸ್ತರಿಸಬೇಕಾದ ಅಗತ್ಯವಿರುವ ಸಂದರ್ಭದಲ್ಲಿ ಕನ್ನಡ ಅಭಿವದ್ಧಿ ಪ್ರಾಧಿಕಾರವು ಹಣಕಾಸಿನ ಕೊರತೆಯ ನೆಪವೊಡ್ಡಿ ಈ ಕೆಲಸವನ್ನೇ ನಿಲ್ಲಿಸುತ್ತಿರುವುದು ಸರಿಯಾದ ಕ್ರಮವಲ್ಲ. ಪ್ರಾಧಿಕಾರವು ಕನ್ನಡದ ಮನಸ್ಸುಗಳನ್ನು ಒಟ್ಟು ಸೇರಿಸಿ ಸಮಾಲೋಚಿಸಿ ಸರ್ಕಾರಕ್ಕೆ ಮನವರಿಕೆ ಮಾಡಿ, ಒತ್ತಡ ತಂದು ಹಣ ಬಿಡುಗಡೆಯ ಕೆಲಸ ಮಾಡಿಸಬೇಕೇ ಹೊರತೂ ಹಣ ನೀಡಿಲ್ಲವೆಂದು ಕಾರ್ಯಕ್ರಮಗಳನ್ನೇ ಕೈಬಿಡುವುದಲ್ಲ. ಮತ್ತು ಪ್ರಾಧಿಕಾರಕ್ಕೆ ಈಗಿರುವ ಎರಡು ಕೋಟಿಯಿಂದ ಕನಿಷ್ಟ ಹತ್ತು ಕೋಟಿ ರೂಪಾಯಿ ಅನುದಾನವನ್ನು ಹೆಚ್ಚಿಸುವುದು ಸರ್ಕಾರಕ್ಕೆ ದೊಡ್ಡ ಹೊರೆಯೇನೂ ಆಗದು. ಈ ಹಣದಲ್ಲಿ ಪ್ರಾಧಿಕಾರವು ಕನ್ನಡದ ಚಿಂತಕರು ಸಂಘಟಕರು ಮತ್ತು ಕಲಾವಿದರೊಂದಿಗೆ ಸಮಾಲೋಚಿಸಿ ಕನ್ನಡ ಕಟ್ಟುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮುಂದಾಗಬೇಕೆಂದು ಒತ್ತಾಯಿಸುತ್ತೇವೆ.
ವಿಠ್ಠಲ ಭಂಡಾರಿ
ಜಿಲ್ಲಾ ಸಂಚಾಲಕ, ಚಿಂತನ ಉತ್ತರ ಕನ್ನಡ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *