

ಕೊವಿಡ್-19 ಪರಿಹಾರ ಪ್ಯಾಕೇಜ್ ಅನ್ನು ಆಟೋ, ಕ್ಯಾಬ್ ಚಾಲಕರು ಸೇರಿದಂತೆ ಎಲ್ಲಾ ವರ್ಗದವರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲು ಮುಂದಾಗಿದೆ.

ಬೆಂಗಳೂರು: ಕೊವಿಡ್-19 ಪರಿಹಾರ ಪ್ಯಾಕೇಜ್ ಅನ್ನು ಆಟೋ, ಕ್ಯಾಬ್ ಚಾಲಕರು ಸೇರಿದಂತೆ ಎಲ್ಲಾ ವರ್ಗದವರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲು ಮುಂದಾಗಿದೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ ಅವರು, ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಎಲ್ಲಾ ವರ್ಗಕ್ಕೂ ಪರಿಹಾರ ನೀಡಲಾಗುವುದು ಎಂದರು.
ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ ಐದು ಸಾವಿರ ರೂಪಾಯಿ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದರು.
ಇದೇ ವೇಳೆ, ಪೊಲೀಸ್ ನೇಮಕಾತಿ ವಯೋಮಿತಿಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 28 ವರ್ಷದಿಂದ 30 ವರ್ಷಕ್ಕೆ ಹಾಗೂ ಎಸ್ ಸಿ, ಎಸ್ ಟಿ ವರ್ಗದವರ ವಯೋಮಿತಿಯನ್ನು 30 ರಿಂದ 32ವರ್ಷಕ್ಕೆ ಹೆಚ್ಚಿಸಲಾಗಿದೆ. ಇದು ಮುಂದಿನ ಒಂದು ಬಾರಿ ನೇಮಕಾತಿಗೆ ಮಾತ್ರ ಅನ್ವಯವಾಗಲಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಇನ್ನು ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿಯನ್ನು ಹಿಂಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
