ಸ್ಪೀಕರ್ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಪಿಎಸಿ ನಿರ್ಧಾರ: ಎಚ್.ಕೆ.ಪಾಟೀಲ್

ಸದನ ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಅಡ್ಡಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಡ್ಡಿಪಡಿಸಿದ್ದು, ಪಿಪಿಇ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರ ತನಿಖೆಗೆ ತಡೆ ನೀಡಿದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧವೇ ಹಕ್ಕುಚ್ಯುತಿ ಮಂಡನೆಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ನಿರ್ಧರಿಸಿರುವುದಾಗಿ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

HK patil

ಬೆಂಗಳೂರು: ಸದನ ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಅಡ್ಡಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಡ್ಡಿಪಡಿಸಿದ್ದು, ಪಿಪಿಇ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರ ತನಿಖೆಗೆ ತಡೆ ನೀಡಿದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧವೇ ಹಕ್ಕುಚ್ಯುತಿ ಮಂಡನೆಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ನಿರ್ಧರಿಸಿರುವುದಾಗಿ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಕೆ.ಪಾಟೀಲ್, ಅವ್ಯವಹಾರಗಳ ಬಗ್ಗೆ ತನಿಖೆ ಮಾಡಲು ಸ್ವಾತಂತ್ರ್ಯ ಸಿಗುತ್ತಿಲ್ಲ. ಕರ್ತವ್ಯ ನಿರ್ವಹಣೆಗೆ ಚ್ಯುತಿಯಾಗಿದೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ತಿಳಿಸಲಾಗಿದೆ. ಸ್ಪೀಕರ್ ವಿರುದ್ಧ ಹಕ್ಕುಚ್ಯುತಿಯನ್ನು ಸಲ್ಲಿಸುವ ಬಗ್ಗೆ ಮಂಗಳವಾರ ಸಭೆ ನಡೆಸಿ ತೀರ್ಮಾನಿಸುವುದಾಗಿ ಹೇಳಿದರು.

ಪಿಪಿಎ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲವೆಂಬ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್.ಕೆ.ಪಾಟೀಲ್, ಪಿಪಿಇ ಕಿಟ್ ಅವ್ಯವಹಾರದ ಬಗ್ಗೆ ಸಮಿತಿಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಇದರ ಪರಿಶೀಲನೆ ಮಾಡಲು ಹೊರಟಿದ್ದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯೇ ಹೊರತು ಕಾಂಗ್ರೆಸ್ ಪಕ್ಷ ಅಲ್ಲ ಎಂದು ತಿರುಗೇಟು ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *