ಬಿಜೆಪಿ ಪಟ್ಟಿಗೆ ಮತ್ತೆರಡು ಹೆಸರು ಸೇರ್ಪಡೆ ಯಾರವರು ಇಬ್ಬರು ದಿಗ್ಗಜರು?

ರಾಜ್ಯಸಭೆ ಚುನಾವಣೆಗೆ ಕಾಮತ್, ಸಂಕೇಶ್ವರ್?

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿಯಿದೆ, ಆದರೆ ಬಿಜೆಪಿ ಕೋರ್ ಕಮಿಟಿ ಇನ್ನೂ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಿಲ್ಲ, ಇದರ ಜೊತೆಗೆ ಇರುವ ಪಟ್ಟಿಗೆ ಹೊಸ ಹೆಸರುಗಳು ಸೇರಿಕೊಳ್ಳುತ್ತಿವೆ.

Vaman kamat and vjaya sankeshwara

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿಯಿದೆ, ಆದರೆ ಬಿಜೆಪಿ ಕೋರ್ ಕಮಿಟಿ ಇನ್ನೂ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಿಲ್ಲ, ಇದರ ಜೊತೆಗೆ ಇರುವ ಪಟ್ಟಿಗೆ ಹೊಸ ಹೆಸರುಗಳು ಸೇರಿಕೊಳ್ಳುತ್ತಿವೆ.

ರಾಜ್ಯಸಭೆಗೆ ಕಡ್ಡಾಯವಾಗಿ ಉತ್ತರ ಕರ್ನಾಟಕದ ಲಿಂಗಾಯತ ಮುಖಂಡರೊಬ್ಬರನ್ನು ಆರಿಸಿ ಕಳುಹಿಸಬೇಕು ಎಂಬ ಒತ್ತಡಗಳು 
ಕೇಳಿ ಬರುತ್ತಿವೆ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಧ್ಯಮ ದಿಗ್ಗಜ ವಿಜಯ ಸಂಕೇಶ್ವರ ಹೆಸರು ಕೇಳಿ ಬರುತ್ತಿದೆ.

ಇದರ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮತ್ತೊಬ್ಬ ಪ್ರಮುಖ ಐಸಿಐಸಿಐ ಮಾಜಿ ಅಧ್ಯಕ್ಷ ವಾಮನ್ ಕಾಮತ್ ಮೇಲೆ ಬಿಜೆಪಿ ಹೈಕಮಾಂಡ್ ದೃಷ್ಟಿ ನೆಟ್ಟಿದೆ. ಕೊರನಾದಿಂದ ಕಂಗೆಟ್ಟಿರುವ ಕೇಂದ್ರ ಸರ್ಕಾರದ ಆರ್ಥಿಕ ಪುನರುಜ್ಜೀವನಕ್ಕೆ ಹಣಕಾಸು ತಜ್ಞರ  ಅವಶ್ಯಕತೆಯಿದೆ. ಹೀಗಾಗಿ ವಾಮನ ಕಾಮತ್ ಹೆಸರು ಅಂತಿಮವಾಗುವ ಸಾಧ್ಯತೆಗಳಿವೆ. ಸಂಘ ಪರಿವಾರದ ಮೆಚ್ಚಿನ ಅಭ್ಯರ್ಥಿಯಾಗಿರುವ ವಾಮನ್ ಕಾಮತ್ ಅವರು ಬ್ರಿಕ್ಸ್ ನ ಮೊದಲ ಅಧ್ಯಕ್ಷರೂ ಆಗಿದ್ದರು.

ರಮೇಶ್ ಕತ್ತಿ ಮತ್ತು ಪ್ರಭಾಕರ್ ಕೋರೆ ಅವಧಿ ಮುಗಿದಿರುವ ಕಾರಣ ತೆರವಾಗಿರುವ 2 ಸ್ಥಾನಗಳಿಗೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕಳುಹಿಸಬೇಕಾಗಿದೆ. ರಾಜ್ಯಸಭೆಗೆ ದಕ್ಷಿಣೇತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷ ಬಯಸಬಹುದಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಆದರೆ ದಿನದಿಂದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತಿದೆ, ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇನ್ನೂ ನಿರ್ಧರಿಸಿಲ್ಲ (kp)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *