ರಾಜ್ಯಸಭಾ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ನ ಹೆವಿವೈಟ್ ಗಳಿಗೆ ಬಿಜೆಪಿ ಸೆಡ್ಡು; ಸಂತೋಷ್ ರಿಂದ ಬಿ.ಜೆ.ಪಿ.ಪ್ರಮುಖರಿಗೆ ಅಸಂತೋಷ!

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ. 

Ramesh katti and Prabhakar kore

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ. 

ಬಿಜೆಪಿ ರಾಷ್ಟ್ರೀಯ ಚುನಾವಣಾ ಸಮಿತಿ ಈ ಇಬ್ಬರು ಹೆಸರುಗಳನ್ನು ಪ್ರಕಟಿಸಿದ್ದು, ಶಿಕ್ಷಣ ಕ್ಷೇತ್ರದ ಪ್ರಮುಖ ಪ್ರಭಾಕರ ಕೋರೆ, ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ರಾಜ್ಯಸಭಾ ಚುನಾವಣೆಯ ಆಸೆ ಭಗ್ನಗೊಂಡಿದೆ. 

ಕಾಂಗ್ರೆಸ್ ಮತ್ತು ಜೆಡಿಎಸ್ ಖರ್ಗೆ, ಗೌಡರಂತಹ ರಾಜಕೀಯದ ಹಿರಿಯ ಹುಲಿಗಳಿಗೆ, ಹೆವಿ ವೈಟ್ ಗಳಿಗೆ ಮನ್ನಣೆ ನೀಡಿದರೆ ಬಿಜೆಪಿ ಇದಕ್ಕೆ ತಿರುಗೇಟು ನೀಡಿದ್ದು, ಅಪ್ಪಟ ಪಕ್ಷದ ಕಾರ್ಯಕರ್ತರಿಗೆ ಮಣೆ ಹಾಕಿ ಸೆಡ್ಡು ಹೊಡೆದಿದೆ. ನಿಷ್ಠಾವಂತ ಕಾರ್ಯಕರ್ತರನ್ನು ಆಯ್ಕೆ ಮಾಡಿ ಭಿನ್ನಮತೀಯ ಚಟುವಟಿಕೆ ನಡೆಸುವವರಿಗೆ ತಿರುಗೇಟು ನೀಡಿದೆ. ಶಿಕ್ಷಣ ಸೇರಿದಂತೆ ಯಾವುದೇ ಲಾಬಿಗೆ ಮಣಿಯುವುದಿಲ್ಲ ಎನ್ನುವ ಸಂದೇಶವನ್ನು ರವಾನಿಸಿದೆ. 

ಈ ಆಯ್ಕೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪ್ರಮುಖ ಪಾತ್ರ ವಹಿಸಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವರಿಗೆ ತಿರುಗೇಟು ನೀಡಿದ್ದಾರೆ.

ಈರಣ್ಣ ಕಡಾಡಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ ಜೂನ್ 1, 1966 ರಲ್ಲಿ ಜನಿಸಿದ್ದು, ಲಿಂಗಾಯಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 1989 ರಿಂದ ಬಿಜೆಪಿಯಲ್ಲಿ ಸಕ್ರಿಯರಾಗಿದ್ದಾರೆ. ಅರಭಾವಿ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದ ಅವರು, ಗೋಕಾಕ್ ತಾಲೂಕು ಬಿಜೆಪಿ ಅಧ್ಯಕ್ಷರಾಗಿ,
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, 1994 ರಲ್ಲಿ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. 

2004ರಲ್ಲಿ ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಲ್ಲದೇ 2010ರಲ್ಲಿ ಬೆಳಗಾವಿ ಜಿ.ಪಂ.ಅಧ್ಯಕ್ಷರಾದರು. ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಅವರು, ಮೊದಲಿನಿಂದಲೂ ಆರ್ ಎಸ್. ಎಸ್., ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಪ್ರಸ್ತುತ ಬಿಜೆಪಿ ವಿಭಾಗೀಯ ಪ್ರಭಾರಿ ಆಗಿದ್ದಾರೆ.  

ಅಶೋಕ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ರಾಯಚೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಶೋಕ್ ಗಸ್ತಿ ರಾಯಚೂರು ನಗರಸಭೆಗೆ ಸದಸ್ಯರಾಗಿ, ಬಳ್ಳಾರಿ ವಿಭಾಗೀಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು. 

ಈ ಹಿಂದೆ 2009 ರಲ್ಲಿ ರಾಯಚೂರು ಜಿಲ್ಲಾ ಅಧ್ಯಕ್ಷರಾಗಿದ್ದ ಅವರು, ಇದುವರೆಗೆ ಪ್ರಮುಖ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಲ್ಲ. ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ಅಶೋಕ್ ಗಸ್ತಿ ಬಿಎಲ್, ಸಂತೋಷ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರು. ಯಡಿಯೂರಪ್ಪ ವಿರುದ್ಧ ಯತ್ನಾಳ್, ಕತ್ತಿಗಳನ್ನು ಎತ್ತಿಕಟ್ಟಿದ ಬಿ.ಎಲ್. ಸಂತೋಷ ಈಗ ಹೊಸದಾಳ ಉರುಳಿಸುವ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *