ರಾಜ್ಯಗಳಿಗೆ ಕೇಂದ್ರ ಸೂಚನೆ-ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆ ಕೊರೋನಾ ತಪಾಸಣೆ ಅಗತ್ಯವಿದೆ

ದೇಶದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 2.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆಗೆ ತೆರಳಿ ಕೊರೋನಾ ಪರೀಕ್ಷೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

File photo

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 2.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆಗೆ ತೆರಳಿ ಕೊರೋನಾ ಪರೀಕ್ಷೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ಕರ್ನಾಟಕ ಸೇರಿ 10 ರಾಜ್ಯಗಳ 38 ಜಿಲ್ಲೆಗಳ 378 ಮಹಾನಗರಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಕೇಂದ್ರ ಸಚಿವಾಲಯವು ಈಗಾಗಲೇ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ಸೋಂಕು ಹರಡುವಿಕೆ ನಿಯಂತ್ರಣ ಮತ್ತು ಸಾವಿನ ಪ್ರಮಾಣ ಇಳಿಕೆಗೆ ಈ ಕ್ರಮಗಳು ಅತ್ಯಗತ್ಯವಾಗಿದೆ ಎಂದು ಸಚಿವಾಲಯ ತಿಳಿಸಿದೆ. 

ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ಪ್ರೀತಿ ಸೂದನ್ ಅವರು ಈ 38 ಮಹಾನಗರಗಳ ಪಾಲಿಕೆಗಳ ಆಯುಕ್ತರು, ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ವೇಳೆ ಈ ಸೂಚನೆಗಳನ್ನು ನೀಡಿದ್ದಾರೆ.ಆದರೆ, ಕರ್ನಾಟಕದಲ್ಲಿ ಯಾವ ಯಾವ ನಗರಗಳು ಈ ಯೋಜನೆಗೆ ಒಳಪಡಲಿವೆ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ. ಲಾಕ್’ಡೌನ್ ತೆರವಾದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಹೊಸ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾವಾರು ಯೋಜನೆ ರೂಪಿಸಬೇಕು. ಮನೆಮನೆಗೆ ತೆರಳಿ ಆರೋಗ್ಯ ತಪಾಸಣೆ, ಉತ್ತಮ ಪರೀಕ್ಷೆ, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಎಲ್ಲಾ ಹಂತದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸಬೇಕು. ಸೋಂಕಿತರು ಪತ್ತೆಯಾದ ಕೂಡಲೇ, ವಿಳಂಬ ಮಾಡದೇ ಅವರನ್ನು ಅಲ್ಲಿಂದ ತೆರವು ಮಾಡಬೇಕು. ಇದರಿಂದ ಸೋಂಕು ಹರಡುವಿಕೆಯನ್ನು ತಡೆಯಬಹುದು ಎಂದು ಸೂಚಿಸಿದ್ದಾರೆ. 

ಸಾರ್ವಜನಿಕ ವ್ಯವಸ್ಥೆಗಳನ್ನು ಹೆಚ್ಚಾಗಿ ಬಳಸುವ ಹೆಚ್ಚಿನ ಜನಸಾಂದ್ರತೆ ಇರುವ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನವಹಿಸಬೇಕು ಎಂದು ಸೂಚಿಲಾಯಿತು. ಜೊತೆಗೆ ಸೋಂಕು ಹೆಚ್ಚಿರುವ ಕಂಟೈನ್ಮೆಂಟ್ ವಲಯ, ಬಫರ್ ವಲಯಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಜನರಿಗೆ ಸೋಂಕಿನ ಕುರಿತು ಅರಿವು ಮೂಡಿಸುವ ಚಟುವಟಿಕೆಗಳ ಬಗ್ಗೆಯೂ ರಾಜ್ಯಗಳಿಗೆ ಮಾಹಿತಿ ನೀಡಲಾಯಿತು. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *