
ಜೂನ್ 30ರಂದು ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಿಗದಿಯಾಗಿದೆ. ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ 4, ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನ ಗೆದ್ದುಕೊಳ್ಳಬಹುದು.

( ಜಾ.ಸ.ಸಿ-11-06-20 ಸಮಾಜಮುಖಿ ನ್ಯೂಸ್) ಸಾರ್ವಜನಿಕ ಪ್ರಕಟಣೆ-

ನಾನು ಸೀತಾ ನಾರಾಯಣ ನಾಯ್ಕ ಕಾನಕೇರಿ, ಹೊಸೂರು,ತಾ-ಸಿದ್ಧಾಪುರ, ಉತ್ತರಕನ್ನಡ ಜಿಲ್ಲೆ ಯ ನಿವಾಸಿಯಾಗಿದ್ದು ನನ್ನ ಎಲ್ಲಾ ದಾಖಲಾತಿಗಳಲ್ಲಿ ಸೀತಾ ನಾರಾಯಣ ನಾಯ್ಕ ಎಂದೇ ಇದೆ. ಆದರೆ ನನ್ನ ಸಿದ್ಧಾಪುರ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯಲ್ಲಿ ನನ್ನ ಹೆಸರು ಸೀತೆ ನಾರಾಯಣ ನಾಯ್ಕ ಎಂದು ನಮೂದಾಗಿದೆ. ಈ ಪ್ರಕಟಣೆಯ ಮೂಲಕ ನನ್ನ ಖಾಯಂ ಹೆಸರು ಸೀತಾ ನಾರಾಯಣ ನಾಯ್ಕ ಎಂಬುದನ್ನು ಸಾರ್ವಜನಿ ಕರ ಅವಗಾಹನೆಗೆ ತಲುಪಿಸುತ್ತೇನೆ. ನನ್ನ ಮುಂದಿನ ಯಾವತ್ತೂ ವ್ಯವಹಾರಗಳು ಸೀತಾ ನಾರಾಯಣ ನಾಯ್ಕ ಎನ್ನುವ ಹೆಸರಿನಲ್ಲೇ ನಡೆಯುತ್ತವೆ ಎಂದು ಸಾರ್ವಜನಿಕರು ಮತ್ತು ಆಡಳಿತ ವ್ಯವಸ್ಥೆಗೆ ದೃಢೀಕರಿಸುತ್ತೇನೆ. (-ಸಹಿ ಇದೆ,) ಸೀತಾ ನಾರಾಯಣ ನಾಯ್ಕ, ಕಾನಕೇರಿ,ಹೊಸೂರು, ಸಿದ್ಧಾಪುರ (ಉ.ಕ.)
ಬೆಂಗಳೂರು: ಜೂನ್ 30ರಂದು ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಿಗದಿಯಾಗಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ನಜೀರ್ ಅಹಮ್ಮದ್, ಜಯಮ್ಮ, ಎಂ.ಸಿ. ವೇಣುಗೋಪಾಲ್, ಎನ್.ಎಸ್. ಬೋಸರಾಜು, ಎಚ್.ಎಂ. ರೇವಣ್ಣ, ಟಿ.ಎ. ಸರವಣ ಹಾಗೂ ಡಿ.ಯು. ಮಲ್ಲಿಕಾರ್ಜುನ ಅವರ ಸೇವಾ ಅವಧಿ ಅಂತ್ಯವಾಗುತ್ತಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿರುವ ಜಯಮ್ಮ, ಬೋಸರಾಜ್, ಹೆಚ್.ಎಂ. ರೇವಣ್ಣ, ನಸೀರ್ ಅಹ್ಮದ್, ಎಂಸಿ ವೇಣುಗೋಪಾಲ್ ( ಕಾಂಗ್ರೆಸ್), ಟಿ.ಎ. ಶರವಣ (ಜೆಡಿಎಸ್), ಡಿ.ಯು. ಮಲ್ಲಿಕಾರ್ಜುನ್ (ಪಕ್ಷೇತರ), ನಾಮ ನಿರ್ದೇಶನಗೊಂಡಿರುವ ಜಯಮಾಲಾ ರಾಮಚಂದ್ರ, ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ, ಇಕ್ಬಾಲ್ ಅಹಮ್ಮದ್ ಸರಡಗಿ, ತಿಪ್ಪಣ್ಣ ಕಮಕನೂರ್ (ಕಾಂಗ್ರೆಸ್), ನಿವೃತ್ತರಾಗಲಿದ್ದಾರೆ.
ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ 4, ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನ ಗೆದ್ದುಕೊಳ್ಳಬಹುದು. ಈ ಸಂಬಂಧ ಮುಂದಿನ ವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಈಗಾಗಲೇ ಜೆಡಿಎಸ್‍ನಲ್ಲಿ ಆಕಾಂಕ್ಷಿಗಳಿಂದ ಪಕ್ಷದ ನಾಯಕರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ. ಜೆಡಿಎಸ್‍ನಲ್ಲಿ ಹಲವು ಮಂದಿ ಆಕಾಂಕ್ಷಿಗಳಿದ್ದು, ಇನ್ನೂ ಯಾವುದೇ ತೀರ್ಮಾನವನ್ನು ವರಿಷ್ಠರು ತೆಗೆದುಕೊಂಡಿಲ್ಲ. ವಿಧಾನಸಭೆಯಲ್ಲಿ ಶಾಸಕರನ್ನು ಹೊಂದಿರುವ ಆಧಾರದ ಮೇಲೆ ಜೆಡಿಎಸ್ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ.
ಒಂದು ಸ್ಥಾನಕ್ಕೆ ಸುಮಾರು 10ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಜೆಡಿಎಸ್‍ನಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಮಾಜಿ ಶಾಸಕ ಕೋನರೆಡ್ಡಿ, ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಸಿ.ರಾಜಣ್ಣ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದಾರೆ.
ಶರವಣ ಜೂ.30ರಂದು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ನಿವೃತ್ತಿಯಾಗಲಿದ್ದಾರೆ. ಮತ್ತೊಂದು ಅವಧಿಗೆ ಅವಕಾಶ ನೀಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ. ಮಾಜಿ ಶಾಸಕ ಕೋನರೆಡ್ಡಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಲು ತಮಗೆ ಅವಕಾಶ ಮಾಡಿಕೊಡಬೇಕೆಂದು ಕೋರಿದ್ದಾರೆ.
ರಾಜ್ಯಸಭೆಗೆ ಈ ಬಾರಿ ಸ್ಪರ್ಧೆ ಮಾಡದಿರುವ ಕುಪೇಂದ್ರರೆಡ್ಡಿ ಅವರ ಹೆಸರು ಕೂಡ ವಿಧಾನ ಪರಿಷತ್ ಚುನಾವಣೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಸೇರಿದೆ. ಆರ್.ಪ್ರಕಾಶ್ ಅವರು ಕೂಡ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲೂ ಅವಕಾಶ ಸಿಗಲಿಲ್ಲ ಎಂಬ
ಅಸಮಾಧಾನವೂ ಅವರಲ್ಲಿದೆ. ಇದುವರೆಗೂ ವಿಧಾನ ಪರಿಷತ್‍ಗೆ ಅಭ್ಯರ್ಥಿ ಆಯ್ಕೆ ಕುರಿತಂತೆ ಜೆಡಿಎಸ್‍ನಲ್ಲಿ ಯಾವುದೇ ನಿರ್ಧಾರವಾಗಿಲ್ಲ.
ವಿಧಾನಸಭೆಯ ಸದಸ್ಯರ ಸಂಖ್ಯೆ 223, ಇದರಲ್ಲಿ ನಾಮ ನಿರ್ದೇಶಿತರು ಕೂಡ ಸೇರಿದ್ದಾರೆ. ಪ್ರತಿ ಅಭ್ಯರ್ಥಿ ಗೆಲ್ಲಲು 29 ಮತಗಳು ಬೇಕಾಗಿದೆ. ಕಾಂಗ್ರೆಸ್ ನಲ್ಲಿ 68 ಶಾಸಕರಿದ್ದು ಇಬ್ಬರನ್ನು ಮಾತ್ರ ಆಯ್ಕೆ ಮಾಡಲು ಸಾಧ್ಯ, ಜೆಡಿಎಸ್ ಸಂಖ್ಯೆ 34 ಕೇವಲ ಒಬ್ಬರಿಗೆ ಮಾತ್ರ ಅವಕಾಶ, ನಾಲ್ಕು ಸದಸ್ಯರನ್ನು ಆಯ್ಕೆ ಮಾಡಲು ಬಿಜೆಪಿಗೆ ಅಗತ್ಯ ಸಂಖ್ಯೆಯಿದೆ. ಹೀಗಾಗಿ ಬಿಜೆಪಿಯಲ್ಲಿ ಲಾಬಿ ತೀವ್ರಗೊಂಡಿದೆ. ನಾಮ ನಿರ್ದೇಶನಗೊಂಡ ಐವರಲ್ಲಿ ನಾನು ಇರಲಿಲ್ಲ, ಹೀಗಾಗಿ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವುದಾಗಿ ಬಿಜೆಪಿ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ. (kp)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
