
ಇದೇ ತಿಂಗಳಲ್ಲಿ ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಬೇಕಿದ್ದ ಚುನಾವಣೆಯಲ್ಲಿ ಜೆ,ಡಿ.ಎಸ್. ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ, ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿ.ಜೆ.ಪಿ.ಯ ಎರಡುಜನ ನಾಯಕರು ಸೇರಿ ಒಟ್ಟೂ 4 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತೆರವಾಗಿರುವ ನಾಲ್ಕು ಸ್ಥಾನಗಳಿಗೆ ನಾಲ್ಕಕ್ಕಿಂತ ಹೆಚ್ಚು ಜನರು ಸ್ಫರ್ಧಿಸಿದ್ದರೆ ಚುನಾವಣೆ ಅನಿವಾರ್ಯವಾಗಿತ್ತು. ಆದರೆ 4 ಸ್ಥಾನಗಳಿಗೆ ನಾಲ್ವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಹಿರಿಯ ಮುಖಂಡರಾದ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಾಮಾನ್ಯ ಕಾರ್ಯಕರ್ತರಾಗಿದ್ದ ಬಿ.ಜೆ.ಪಿ.ಯ ಉತ್ತರ ಕರ್ನಾಟಕದ ಇಬ್ಬರು ಸೇರಿ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಕ್ಕೆ ಕನ್ನಡನಾಡು
ಸಂಬ್ರಮಿಸಿದೆ.
