

ತಿಂಗಳ ನಂತರ ಬಿಜೆಪಿ ಪ್ರಧಾನ ಕಚೇರಿ ಚಟುವಟಿಕೆಯ ಆಗರವಾಗಿತ್ತು. ಬಿಜೆಪಿ ಇಬ್ಬರು ನೂತನ ಸಚಿವರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ನಡೆಸಿದರು.

ಬೆಂಗಳೂರು: ತಿಂಗಳ ನಂತರ ಬಿಜೆಪಿ ಪ್ರಧಾನ ಕಚೇರಿ ಚಟುವಟಿಕೆಯ ಆಗರವಾಗಿತ್ತು. ಬಿಜೆಪಿ ಇಬ್ಬರು ನೂತನ ಸಚಿವರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಸಚಿವರು ಕಡ್ಡಾಯವಾಗಿ ಪಕ್ಷದ ಕಚೇರಿಗೆ ಭೇಟಿ ನೀಡಬೇಕೆಂದು ಆದೇಶಿಸಿದ್ದರು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಯಾರೋಬ್ಬರು ಬರಲು ಸಾಧ್ಯವಾಗಿರಲಿಲ್ಲ.
ಆದರೆ ಹೊಸ ಸಚಿವರು ಈ ಟ್ರೆಂಡ್ ಪುನಾರಂಭಿಸಿದ್ದಾರೆ, ಹೊಸ ಸಚಿವರು ಕಾರ್ಯಕರ್ತರ ಜೊತೆ ಉತ್ತಮ ಸಂವಹನ ಹೊಂದಿದ್ದಾರೆ ಎಂದು ಈ ಹಿಂದೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು.
ಅದೇ ಯೋಜನೆಯನ್ನು ಗಮನದಲ್ಲಿರಿಸಿಕೊಂಡಿದ್ದ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಪಕ್ಷದ ಕಚೇರಿಗೆ ಭೇಟಿ ನೀಡಿ ಅಹವಾಲು ಕೇಳಿದ್ದಾರೆ.
ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದೆ. ಸಚಿವರು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಾರೆ ಎಂಬುದು ಸಂತಸದ ವಿಷಯ ಎಂದು ರಾಜ್ಯ ಬಿಜೆಪಿ ವಕ್ತಾರ ಎ ಎಚ್ ಆನಂದ್ ಹೇಳಿದ್ದಾರೆ.
