corona -positive!ಕೊರೋನಾ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ, ರೋಗಿಯ ಜೀವ ಉಳಿಸಬಲ್ಲ ಔಷಧಿ ಲಭ್ಯ

ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದ್ದು, ಅತ್ಯಂತ ಗಂಭೀರವಾದ ಕೊವಿಡ್-19 ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ರೋಗಿಗಳ ಜೀವ ಉಳಿಸುವ ಔಷಧಿಯನ್ನು ಕಂಡುಹಿಡಿಯಲಾಗಿದೆ.

coronavirus

ಪ್ಯಾರಿಸ್: ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದ್ದು, ಅತ್ಯಂತ ಗಂಭೀರವಾದ ಕೊವಿಡ್-19 ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ರೋಗಿಗಳ ಜೀವ ಉಳಿಸುವ ಔಷಧಿಯನ್ನು ಕಂಡುಹಿಡಿಯಲಾಗಿದೆ.

ಅತ್ಯಂತ ಕಡಿಮೆ ಬೆಲೆಗೆ ಸಿಗುವ ʼಡೆಕ್ಸಮೆಥಾಸೊನ್ʼ(Dexamethasone) ಎಂಬ ಔಷಧಿಯನ್ನು ಕೊವಿಡ್‌-19 ನಿಂದ ಬಳಲುತ್ತಿರುವ ರೋಗಿಗೆ ನೀಡಿದರೆ ಗುಣವಾಗುವ ಸಾಧ್ಯತೆ ಹೆಚ್ಚು ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರ ತಂಡ ಹೇಳಿದೆ.

ಡೆಕ್ಸಮೆಥಾಸೊನ್ ನೀಡಿದ್ದರಿಂದ ಇಂಗ್ಲೆಂಡ್‌ನಲ್ಲಿ ಸಾವಿನ ದವಡೆಯಲ್ಲಿದ್ದ ಸುಮಾರು 5 ಸಾವಿರ ರೋಗಿಗಳನ್ನು ಪಾರುಮಾಡಲಾಗಿದೆ. 20 ರೋಗಿಗಳ ಪೈಕಿ 19 ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ. ಆದರೆ ಇತರೇ ರೋಗಗಳಿಂದಾಗಿ ಹೈ ರಿಸ್ಕ್‌ ನಲ್ಲಿರುವ ರೋಗಿಗಳಿಗೆ ವೆಂಟಿಲೇಟರ್‌ ಅಗತ್ಯವಿದೆ ಎಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.

ಈ ತಂಡದಲ್ಲಿದ್ದ ಪ್ರೊ. ಪೀಟರ್‌ ಹಾರ್ಬಿ ಪ್ರತಿಕ್ರಿಯಿಸಿ, ಸದ್ಯ ಸಾವನ್ನು ತಪ್ಪಿಸಲು ಇರುವ ಏಕೈಕ ಔಷಧಿ ಇದು. ಈ ಡ್ರಗ್ಸ್‌ ಸಾವಿನ ಪ್ರಮಾಣವನ್ನು ಭಾರೀ ಸಂಖ್ಯೆಯಲ್ಲಿ ಕಡಿಮೆ ಮಾಡುತ್ತದೆ. ಕೊರೋನಾ ವೈರಸ್‌ ಲಸಿಕೆ ವಿಚಾರದಲ್ಲಿ ಇದೊಂದು ಮಹತ್ವದ ತಿರುವ ನೀಡಬಲ್ಲ ವಿಚಾರ ಎಂದು ಹೇಳಿದ್ದಾರೆ.

ನಾನು ಬಹಳ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಈ ಔಷಧಿಯಿಂದ ಖಂಡಿತವಾಗಿಯೂ ಲಾಭವಿದೆ. ಒಂದು ಡೆಕ್ಸಮೆಥಾಸೊನ್ ಗೆ 5 ಪೌಂಡ್‌(481. ರೂ.) ಖರ್ಚಾಗಬಹುದು. ಹೀಗಾಗಿ 10 ದಿನಗಳಿಗೆ 35 ಪೌಂಡ್‌(3,400 ರೂ.) ಆಗಬಹುದು. ಈ ಡ್ರಗ್ಸ್‌ ವಿಶ್ವದೆಲ್ಲೆಡೆ ಲಭ್ಯವಿದೆ. ವಿಶೇಷವಾಗಿ ಬಡ ರಾಷ್ಟ್ರಗಳಿಗೆ ಇದರಿಂದ ಬಹಳ ಸಹಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *