ವಿಧಾನಪರಿಷತ್ ಗೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆ ಖಚಿತ!

Vidhana soudha

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಇದೇ ತಿಂಗಳ ೨೯ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಎಲ್ಲಾ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಬಿಜೆಪಿಯ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸುನೀಲ್ ವಲ್ಯಾಪುರೆ ಹಾಗೂ ಪ್ರತಾಪ ಸಿಂಹ ನಾಯಕ್ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹ್ಮದ್ ಉಮೇದುವಾರಿಕೆ ಸಲ್ಲಿಸುವಾಗ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಜೆಡಿಎಸ್ ಅಭ್ಯರ್ಥಿ ಇಂಚರ ಗೋವಿಂದರಾಜು ಪಕ್ಷದ ಮುಖಂಡರಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಹೊರಟ್ಟಿ ಮತ್ತಿತರರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ಯಡವನಹಳ್ಳಿ ಪಿ.ಸಿ.ಕೃಷ್ಣೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಪಕ್ಷೇತರ ಅಭ್ಯರ್ಥಿ ನಾಮಪತ್ರಕ್ಕೆ ಶಾಸಕರು ಸೂಚಕರಾಗಿ ಸಹಿ ಹಾಕಿಲ್ಲ. ಹೀಗಾಗಿ ಅವರ ನಾಮಪತ್ರ ತಿರಸ್ಕೃತವಾಗುವ ಸಂಭವವಿದೆ. ಉಳಿದ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದರೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. (k.p.)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *