

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ತಂದೆ ಹಾಗೂ ಮನೆ ಕೆಲಸದವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ತಂದೆ ಹಾಗೂ ಮನೆ ಕೆಲಸದವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆ ಕೆಲಸದವರಿಗೆ ಸೋಂಕು ದೃಢಪಟ್ಟಿತ್ತು. ಇಂದು ಬೆಳಗ್ಗೆ ಸುಧಾಕರ್ ಅವರ 82 ವರ್ಷ ಪ್ರಾಯದ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.


ಸುಧಾಕರ ಮನೆ ಕೆಲಸದವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಸುಧಾಕರ್ ಅವರು ತಾವು ಸ್ವಯಂ ಕ್ವಾರಂಟೈನ್ ಆಗುವುದಾಗಿ ಹೇಳಿದ್ದು ಮುಖ್ಯಮಂತ್ರಿಗಳ ಜೊತೆಗಿನ ಸಭೆಯಿಂದ ಹೊರಗುಳಿದಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಸುಧಾಕರ್, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






