![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ
ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
![ಎಚ್ ಡಿ ಕುಮಾರಸ್ವಾಮಿ HDKumaraswmy1](https://i0.wp.com/media.kannadaprabha.com/uploads/user/imagelibrary/2020/6/23/w900X450/HDKumaraswmy.jpg?w=760&ssl=1)
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು, ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು ಚಾಮರಾಜಪೇಟೆ ಏರಿಯಾಗಳನ್ನು ಜೂನ್ 30ರವರೆಗೆ ಸೀಲ್ ಡೌನ್ ಮಾಡಲು ಸರ್ಕಾರ ಮುಂದಾಗಿದೆ.
ಸರ್ಕಾರದ ಈ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ ಲಾಕ್ ಡೌನ್
ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ.ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)