ರಾಜ್ಯದಲ್ಲಿ ಇಂದು ಕೊರೋನಾಗೆ 14 ಬಲಿ, 397 ಜನರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ.

Markaz attendee who caught COVID-19 ends life

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಐವರು ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 173 ಹಾಗೂ ಕಲಬುರಗಿಯಲ್ಲಿ 34 ಮಂದಿ ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 397 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಬುಧವಾರ 149 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 6151ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3799 ಸಕ್ರಿಯ ಪ್ರಕರಣಗಳಿದ್ದು, 112 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಪತ್ತೆಯಾದ 397 ಸೋಂಕಿತರ ಪೈಕಿ 8 ಮಂದಿ ಅಂತರಾಷ್ಟ್ರೀಯ ಪ್ರಯಾಣ ಹಿನ್ನೆಲೆ ಹಾಗೂ 75 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *