ಮಂಗಳೂರಿನ ಪಿಲಿಕುಳ ಪ್ರಾಣಿ ಸಂಗ್ರಹಾಲಯದಲ್ಲಿದ್ದ ಜಿಂಕೆಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ 10 ಜಿಂಕೆಗಳು ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ.
ಮಂಗಳೂರು: ಮಂಗಳೂರಿನ ಪಿಲಿಕುಳ ಪ್ರಾಣಿ ಸಂಗ್ರಹಾಲಯದಲ್ಲಿದ್ದ ಜಿಂಕೆಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ 10 ಜಿಂಕೆಗಳು ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ.
ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಪ್ರಾಣಿ ಸಂಗ್ರಹಾಲಯದ ಕಾಂಪೌಂಡ್ ಗೋಡೆ ಕುಸಿದುಬಿದ್ದ ಪರಿಣಾಮ ಪ್ರಾಣಿ ಸಂಗ್ರಹಾಲಯದ ಒಳಗೆ ನುಗ್ಗಿದ 5 ಬೀದಿ ನಾಯಿಗಳು, ಜಿಂಕೆಗಳ ಮೇಲೆ ದಾಳಿ ಮಾಡಿವೆ ಎಂದು ಪಿಲಿಕುಳ ಪ್ರಾಣಿಸಂಗ್ರಹಾಲಯದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.
ನಾಯಿಗಳು ಹಲವು ಜಿಂಕೆಗಳ ಮೇಲೆ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿದ್ದು, ಸಾವಿನ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.
ಆವರಣದೊಳಗೆ 40 ಜಿಂಕೆಗಳು ಇದ್ದವು. ಈ ಪೈಕಿ ಐದು ಮೃತಪಟ್ಟಿದ್ದು, ಗಾಯಗೊಂಡ ಜಿಂಕೆಗಳನ್ನು ನಾವು ಉದ್ಯಾನದೊಳಗಿನ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.