
ಈ ವಾರ ಭಾರತಕ್ಕೆ ಕರೋನಾ ಮಾರಕವಾಗಲಿರುವ ಲಕ್ಷಣಗಳಿವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕೂಡಾ ಒಂದೇ ದಿನ ಹತ್ತಿರತ್ತಿರ ಸಾವಿರ ಸಂಖ್ಯೆಯ ಜನರಲ್ಲಿ ಕರೋನಾ ದೃಢವಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ರವಿವಾರದ 14 ಪ್ರಕರಣಗಳೊಂದಿಗೆ ಇಂದಿನ 19 ಕರೋನಾ ಸೋಂಕಿತ ಪ್ರಕರಣಗಳು ಸೇರಿ 33 ಪ್ರಕರಣಗಳು ಈ ವಾರದ ದಾಖಲೆಗೆ ಸೇರಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬೆಂಗಳೂರಿನಂತೆ ಪೊಲೀಸರಲ್ಲಿ ಕೋವಿಡ್19 ಪತ್ತೆಯಾಗಿ ಪೊಲೀಸ್ ಠಾಣೆ, ಪೊಲೀಸ್ ಉಪ ವರಿಷ್ಠರ ಕಛೇರಿಗಳನ್ನು ಕಂಟೇನ್ ಮೆಂಟ್ ಪ್ರದೇಶಗಳೆಂದು ಘೋಶಿಸಲಾಗಿದೆ.
ಕಳ್ಳತನದ ಆರೋಪಿಯಿಂದ ಪ್ರಾರಂಭವಾದ ಕರೋನಾ ನ್ಯಾಯಾಧೀಶರು, ಎ.ಪಿ.ಪಿ. ಪೊಲೀಸ್ ಅಧಿಕಾರಿಗಳ ವರೆಗೆ ಅನೇಕರನ್ನು ಕಾರಂಟೈನ್ ಆಗುವಂತೆ ಮಾಡಿದೆ. ರಾಜ್ಯದ ರಾಜಧಾನಿ ಬೆಂಗಳೂರು ಲಾಕ್ ಡೌನ್ ಆಗಿರುವಂತೆ ರಾಜ್ಯದ ಕೆಲವು ಜಿಲ್ಲೆಗಳನ್ನೂ, ತಾಲೂಕು, ಗ್ರಾ.ಪಂ., ವಾರ್ಡ್ಗಳನ್ನು ಲಾಕ್ ಡೌನ್ ಮಾಡುವ ಅನಿವಾರ್ಯತೆಯಿದ್ದು ಕರೋನಾ ವಿಶ್ವವ್ಯಾಪಕವಾಗಿ ಎಲ್ಲರಿಗೂ ಕಂಟಕವಾಗಿ ಪರಿಣಮಿಸಿದೆ.
(related) ಭಾರತಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣ ದಾಖಲು
ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.



- ತಮಿಳುನಾಡು: ಒಂದೇ ದಿನ 3,940 ಹೊಸ ಕೊರೋನಾ ಸೋಂಕು ಪ್ರಕರಣಗಳ ದಾಖಲು, 54 ಸಾವು!
- ಕೇರಳಕ್ಕೆ ಮತ್ತೆ ಕೊರೋನಾಘಾತ; ಒಂದೇ ದಿನ 118 ಸೋಂಕು ಪ್ರಕರಣ ದಾಖಲು
- ಮುಂಬೈನಲ್ಲಿ ಮತ್ತೆ 1,460 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 80,188 ಕ್ಕೆ ಏರಿಕೆ
- ಮಹಾರಾಷ್ಟ್ರ: 24 ಗಂಟೆಗಳಲ್ಲಿ 5493 ಹೊಸ ಸೋಂಕಿತರ ದಾಖಲು, 156 ಸೋಂಕಿತರ ಸಾವು!
- ದೆಹಲಿ: ಒಂದೇ ದಿನ 2889 ಹೊಸ ಸೋಂಕು ಪ್ರಕರಣ, 83 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
ನವದೆಹಲಿ: ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಆ ಮೂಲಕ ದೇಶದಲ್ಲಿ ಒಟ್ಟಾರೆ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 5,48,318ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,21,723 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ದೇಶದಲ್ಲಿ ಪ್ರಸ್ತುತ 2,10,120 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 380 ಮಂದಿ ಸೋಂಕಿತರು ಸಾವನ್ಮಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 16,475ಕ್ಕೆ ಏರಿಕೆಯಾಗಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 83 ಸಾವಿರ ಗಡಿದಾಟಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2889 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 83077ಕ್ಕೆ ಏರಿಕೆಯಾಗಿದೆ.
ಇನ್ನು ಕೊರೋನಾ ಸೋಂಕಿತರ ಗರಿಷ್ಠ ಸಂಖ್ಯೆ ಪಟ್ಟಿಯಲ್ಲಿ ಅಗ್ರ ಸ್ಥಾನಿಯಾಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 5493 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,64,626ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 156 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 7,429ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಏರಿಕೆ ಕಾಣುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರವೊಂದರಲ್ಲೇ 783 ಪ್ರಕರಣಗಳು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1267 ಪ್ರಕರಣಗಳು ವರದಿಯಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 13190ಕ್ಕೇರಿಕೆಯಾಗಿದ್ದು, ಮೃತರ ಸಂಖ್ಯೆ 211 ತಲುಪಿದೆ.
