

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಗುರುವಾರ ಪದಗ್ರಹಣ ಸ್ವೀಕರಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸುವ ಮೂಲಕ ಪದಗ್ರಹಣ ಸಮಾರಂಭ ನಡೆಯಿತು.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು.

ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಧ್ವಜವನ್ನು ಶಿವಕುಮಾರ್ ಗೆ ಹಸ್ತಾಂತರ ಮಾಡಿದರು. ಕಾರ್ಯಾದ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಸಹ ಪದಗ್ರಹಣ ಮಾಡಿದರು.
ಇದೇ ವೇಳೆ ರಾಜ್ಯದ ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಪ್ರತಿಜ್ಞೆ ಸ್ವೀಕರಿಸಿದರು.


ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಸಂಗೀತ ನಿರ್ದೇಶಕ ಸಾಧುಕೋಕಿಲ ಸಂಗೀತ ಸುಧೆಯೊಂದಿಗೆ ಜ್ಯೋತಿ ಬೆಳಗಿ ಕಾರ್ಯಕ್ರಮಕ್ಕೆ ರಂಗು ತಂದಿತು. ಕೆಪಿಸಿಸಿ ಅಧ್ಯಕ್ಷರ ಪ್ರಮಾಣ ವಚನ ಕಾರ್ಯಕ್ರಮದ ಆರಂಭದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ಸೇವಾದಳ ಘಟಕದಿಂದ ವಂದೇ ಮಾತರಂ ಗೀತೆ ಮೊಳಗಿದ್ದು, ಕೆಪಿಸಿಸಿ ವಿವಿಧ ಘಟಕಗಳು, ಮುಖಂಡರಿಂದ ಜ್ಯೋತಿ ಬೆಳಗಿಸಲಾಯಿತು. ವೇದಿಕೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ರಹ್ಮಾನ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.
ಉದ್ಘಾಟನಾ ಭಾಷಣದಲ್ಲಿ ಪದಗ್ರಹಣ ಕಾರ್ಯಕ್ರಮ ಕುರಿತು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಸಂದೇಶವನ್ನು ವೇಣುಗೋಪಾಲ್ ವಾಚಿಸಿದರು. “ಎನ್ ಎಸ್ ಯು ಐ ನಿಂದಲೂ ನಾನು ಡಿಕೆ ಶಿವಕುಮಾರ್ ರನ್ನುಬಲ್ಲೆ. ತಳ ಮಟ್ಟದಿಂದ ಬೆಳೆದು ಬಂದು ಇಂದು ಈ ಮಟ್ಟಕ್ಕೇರಿದ್ದಾರೆ. ಸವಾಲುಗಳು ಅವಕಾಶಗಳನ್ನು ಸೃಷ್ಟಿ ಮಾಡುತ್ತವೆ. ಅಂತಹ ಅವಕಾಶಗಳನ್ನು ಶಿವಕುಮಾರ್ ಚೆನ್ನಾಗಿ ಬಳಸಿಕೊಂಡಿದ್ದಾರೆ. ಇಂದು ಬಂಡೆ ತರಹ ಸವಾಲುಗಳನ್ನೆಲ್ಲ ಗೆದ್ದು ನಮ್ಮ ಮುಂದೆ ನಿಂತಿದ್ದಾರೆ ಎಂದರು.
ಗುಜರಾತ್ ಕಾಂಗ್ರೆಸ್ ಶಾಸಕರ ರಕ್ಷಣೆ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ನಿರ್ವಹಿಸಿದ ಸೇವೆ ಎದುರಿಸಿದ್ದ ಸಂಕಷ್ಟಗಳನ್ನು ವೇಣುಗೋಪಾಲ್ ಭಾಷಣದಲ್ಲಿ ಸ್ಮರಿಸಿದರು.
ಕರ್ನಾಟಕದಲ್ಲಿ ಪಕ್ಷಕ್ಕೆ ಒಳ್ಳೆಯ ತಳಹದಿ ಇದೆ. ಒಳ್ಳೆಯ ಪಥದಲ್ಲಿ ಡಿ.ಕೆ.ಶಿವಕುಮಾರ್ ಪಕ್ಷವನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಕೋವಿಡ್ 19, ಆರ್ಥಿಕ ಪರಿಸ್ಥಿತಿಯ ಸಂಕಷ್ಟದ ನಡುವೆ ರಾಷ್ಟ್ರದ ಜನ ತೊಂದರೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ಆಯೋಜಿಸಿರುವ ಡಿಕೆ ಶಿವಕುಮಾರ್ ರನ್ನು ಅಭಿನಂದಿಸುವುದಾಗಿ ವೇಣುಗೋಪಾಲ್ ಹೇಳಿದರು.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
