
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸಂಜೆ 4 ಗಂಟೆಗೆ ಬಿಜೆಪಿ ಶಾಸಕರು ಮತ್ತು ಸಂಸದರ ತುರ್ತುಸಭೆ ಕರೆದಿದ್ದಾರೆ. ಮಹಾಮಾರಿ ಕೋರೋನಾ ವಿರುದ್ಧ ಹೋರಾಟ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಜೂನ್ 26 ರಂದು ಕೂಡ ಸಿಎಂ ಸಭೆ ಕರೆದಿದ್ದರು


ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸಂಜೆ 4 ಗಂಟೆಗೆ ಬಿಜೆಪಿ ಶಾಸಕರು ಮತ್ತು ಸಂಸದರ ತುರ್ತುಸಭೆ ಕರೆದಿದ್ದಾರೆ.
ಮಹಾಮಾರಿ ಕೋರೋನಾ ವಿರುದ್ಧ ಹೋರಾಟ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಜೂನ್ 26 ರಂದು ಕೂಡ ಸಿಎಂ ಸಭೆ ಕರೆದಿದ್ದರು, ಆದರೆ ಈ ಬಾರಿ ಕೇವಲ ಬಿಜೆಪಿ ಶಾಸಕರು ಮತ್ತು ಸಂಸದರು ಭಾಗವಹಿಸಲಿದ್ದಾರೆ.ಮತ್ತೆ ಲಾಕ್ ಡೌನ್ ಅವಶ್ಯಕತೆಯಿದೆಯೇ ಅಥವಾ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಬೇಕೆ ಎಂಬ ಬಗ್ಗೆ ಸಮಾಲೋಚನೆ ನಡೆಯಲಿದೆ.
ಈ ಮೊದಲು ತಮ್ಮ ಕ್ಷೇತ್ರದಲ್ಲಿ ಒಂದೋ ಅಥವಾ ಎರಡು ಕೊರೋನಾ ಕೇಸ್ ಇತ್ತು ಆದರೆ ಈ ದಿನಕ್ಕೆ 12-15 ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡತ್ತಿರುವುದಾಗಿ ಶಾಸಕ ರವಿ ಸುಬ್ರಮಣ್ಯ ತಿಳಿಸಿದ್ದಾರೆ.
ಅಂತರ ಜಿಲ್ಲಾ ಮಟ್ಟದಲ್ಲಿ ಹೆಚ್ಚಿನ ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡುವ ಅವಶ್ಯಕತೆಯಿದೆ, ಬೆಂಗಳೂರಿನ ಎಲ್ಲಾ ಸ್ಥಳಗಳಲ್ಲೂ ಜನತೆ ಹೆಚ್ಚಿನ ಪ್ರಮಾಣದಲ್ಲಿ ಸಂಚರಿಸುತ್ತಿದ್ದಾರೆ. ಜೊತೆಗೆ ಎಲ್ಲಾ ಸ್ಥಳಗಳಿಂದಲೂ ಜನ ಬೆಂಗಳೂರಿಗೆ ಆಮಿಸುತ್ತಿದ್ದಾರೆ ಎಂದು ಸಂಸದ ಪಿಸಿ ಮೋಹನ್ ಅಭಿಪ್ರಾಯ ಪಟ್ಟಿದ್ದಾರೆ.
ಈ ಬಾರಿಯ ಸಭೆಯಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸಭೆಯಲ್ಲಿ ಬೆಂಗಳೂರು ನಗರ ಅಭಿವೃದ್ಧಿ ವಿಷಯಗಳ ಬಗ್ಗೆಯೂ ಚರ್ಚಿಸಲಿದ್ದು, ಸಿಎಂ ಅವರ ಗೃಹ ಕಚೇರಿಯಲ್ಲಿ ನಡೆಯಲಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
